Breaking News

ಕೆಎಸ್ಸಾರ್ಟಿಸಿ ಬಸ್​ ಟಿಕೆಟ್ ದರ ಹೆಚ್ಚುತ್ತಾ? ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದೇನು?

Spread the love

ಮೈಸೂರು: ಬಸ್​ ಟಿಕೆಟ್​ ದರ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ ಕರೊನಾ ಸಂಕಷ್ಟ ಇರುವ ಕಾರಣ ಸದ್ಯಕ್ಕೆ ಬೆಲೆ ಏರಿಕೆ ಮಾಡಲ್ಲ. ಈಗಷ್ಟೇ ಅನ್‌ಲಾಕ್ ಆಗಿದೆ. ಜನರಿಗೆ ಈಗಲೂ ಬಸ್‌ನಲ್ಲಿ ಓಡಾಡಿದರೆ ಕರೊನಾ ಬರುತ್ತೆ ಅನ್ನುವ ಭಯ ಇದೆ. ಜನರಿಗೂ ಲಾಕ್‌ಡೌನ್‌ನಿಂದಾಗಿ ತೊಂದರೆ ಆಗಿದೆ. ಇಂತಹ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಇನ್ನಷ್ಟು ಸಮಸ್ಯೆ ಆಗುತ್ತೆ. ಆದ್ದರಿಂದ ಕೆಎಸ್‌ಆರ್‌ಟಿಸಿ ಬಸ್​ ಟಿಕೆಟ್​ ದರ ಏರಿಕೆ ಮಾಡುತ್ತಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಸಾರಿಗೆ ನೌಕರರು 9 ಬೇಡಿಕೆ ಮುಂದಿಟ್ಟಿದ್ದರು. 8 ಬೇಡಿಕೆ ಈಡೇರಿಸಿದ್ದೇವೆ. ವೇತನ ಪರಿಷ್1132496ಕರಣೆ ಮಾಡಬೇಕು ಅಂತ ಕೇಳುತ್ತಿದ್ದಾರೆ. ಲಾಕ್‌ಡೌನ್‌ನಿಂದಾಗಿ ನಿಗಮಕ್ಕೆ 4000 ಕೋಟಿ ರೂ. ನಷ್ಟ ಆಗಿದೆ. ಸಾಮಾಜಿಕ ಅಂತರ ಕಾಪಾಡಲು ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಇದೆ. ಈಗ ಬರುತ್ತಿರುವ ಆದಾಯ ಇಂಧನಕ್ಕೂ ಸಾಲುತ್ತಿಲ್ಲ. ನಿಗಮಕ್ಕೆ ಆದಾಯ ಬರಲು ಶುರುವಾದ ನಂತರ ವೇತನ ಪರಿಷ್ಕರಣೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ