Breaking News

ಲಂಚಪಡೆಯುತಿದ್ದ ಪಿಡಿಓ ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ

Spread the love

ಚಿತ್ರದುರ್ಗ: ಲಂಚಪಡೆಯುತಿದ್ದ ಪಿಡಿಓ ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾ.ಪಂ ಪಿಡಿಓ ಶ್ರೀನಿವಾಸ್ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಮನೆಯ ಇ-ಸ್ವತ್ತು ಹಾಗೂ ಜಾಬ್ ಕಾರ್ಡ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೇಳೆ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಗ್ರಾಮದ ಗುರುಶಾಂತಪ್ಪ ಎಂಬುವರ ಬಳಿ ಪಿಡಿಓ ಶ್ರೀನಿವಾಸ್ ಅವರು, 2ಸಾವಿರ ರೂಪಾಯಿ ಲಂಚ ಕೊಟ್ಟರೆ ಮಾತ್ರ, ತಮ್ಮ ಕೆಲಸ ಮಾಡಿಕೊಡುವುದಾಗಿ ಬೇಡಿಕೆ ಇಟ್ಟಿದ್ದರು. ಇಂದು ಪಿಡಿಓ ಸಾಹೇಬ್ರು ಲಂಚ ಸ್ವೀಕಾರಿಸುವ ವೇಳೆ ದಿಡೀರ್ ಅಂತ ಗ್ರಾಮಪಂಚಾಯ್ತಿ ಕಚೇರಿ ಮೇಲೆ ಎಸಿಬಿ ಎಸ್ ಐ ಪ್ರವೀಣ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿನಡೆಸಿದ್ದು, ಶ್ರೀನಿವಾಸ್‍ನನ್ನು ವಶಕ್ಕೆ ಪಡೆದು ತನಿಖೆ ನಡೆಸುತಿದ್ದಾರೆ.

ಭ್ರಷ್ಟಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಹಲವು ತಂತ್ರಜ್ಞಾನಗಳನ್ನು ಜಾರಿಗೊಳಿಸಿದೆ. ಆದರೂ ಅಧಿಕಾರಿಗಳು ಮಾತ್ರ ಅವರ ಕೈ ಕಸುಬನ್ನು ಬಿಟ್ಟಿಲ್ಲ, ಇದಕ್ಕೆ ತಾಜಾ ಉಧಾಹರಣೆಈ ಘಟನೆಯಾಗಿದೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ