Breaking News

ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ: ಬಿಜೆಪಿ ಶಾಸಕ ಯತ್ನಾಳ್

Spread the love

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಚಾಮರಾಜನಗರ ತಾಲೂಕಿನ ಮರಿಯಾಲ ಗ್ರಾಮದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ. ರಾಜಶೇಖರ ಮೂರ್ತಿರವರ ಸಮಾಧಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ದಿಲ್ಲಿಯಲ್ಲಿರುವ ಬಿಜೆಪಿ ಹೈಕಮಾಂಡ್ ವೀಕ್ಷಿಸುತ್ತಿದೆ. ರಾಜ್ಯದಲ್ಲಿ ಎಷ್ಟು ಬೇಗ ಮುಖ್ಯಮಂತ್ರಿ ಬದಲಾಗುತ್ತಾರೋ ಅಷ್ಟು ಒಳ್ಳೆಯದು ಎಂಬ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನತೆ ನಿರೀಕ್ಷೆ ಮಾಡಿರದ ವ್ಯಕ್ತಿ ಕರ್ನಾಟಕದ ಮುಖ್ಯಮಂತ್ರಿಯಾಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು ಮುಖ್ಯಮಂತ್ರಿಯಾಗುತ್ತಾರೆ ಎಂದು ತಿಳಿಸಿದರು.

ಹೈಕಮಾಂಡ್ ಒಂದು ವೇಳೆ ತಮಗೆ ಅವಕಾಶ ಕೊಟ್ಟರೆ ಬೇಡ ಎನ್ನುವುದಿಲ್ಲ ಎಂದ ಅವರು, ಕೆಲ ಶಾಸಕರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ಕೊಡಲ್ಲ ಎಂಬ ಭಯದಿಂದ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.

ಅಖಿಲ ಭಾರತ ಪಂಚಮಶಾಲಿ ಮಠಾಧೀಶರ ಒಕ್ಕೂಟ ಸ್ಥಾಪನೆ ರಾಜಕೀಯ ಪ್ರೇರಿತವಾಗಿದೆ. ನಿನ್ನೆ ಸಭೆ ಸೇರಿದ್ದವರು ಪಂಚಮಶಾಲಿ ಪೀಠಾದಿಪತಿಗಳಲ್ಲ. ಅವರೆಲ್ಲ ವಿರಕ್ತ ಮಠದ ಸ್ವಾಮೀಜಿ ಎಂದು ಹೇಳಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ