Breaking News
Home / ರಾಜಕೀಯ / ಪಕ್ಷದ ಹಿರಿಯ ನಾಯಕರಿಂದ ಶೋಭಾಗೆ ದೆಹಲಿ ಕರೆ: ಸಚಿವ ಸ್ಥಾನ ಸಿಗುವ ಸಾಧ್ಯತೆ ?

ಪಕ್ಷದ ಹಿರಿಯ ನಾಯಕರಿಂದ ಶೋಭಾಗೆ ದೆಹಲಿ ಕರೆ: ಸಚಿವ ಸ್ಥಾನ ಸಿಗುವ ಸಾಧ್ಯತೆ ?

Spread the love

ಕಾರ್ಕಳ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.

 

ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರಿಯ ನಾಯಕರಿಂದ ಕರೆ ಬಂದಿದೆ ಎಂದು ಸಂಸದೆ ಆಪ್ತ ಸಹಾಯಕರು ಉದಯವಾಣಿ ಗೆ ಮಾಹಿತಿ ನೀಡಿದ್ದಾರೆ.

ಇಂದು ನಡೆಯಲಿರುವ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿ ಕೆಲ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ. ರಾಜ್ಯದಿಂದ ಇಬ್ಬರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ. ಕೋವಿಡ್ ಸೋಂಕಿಗೆ ಬಲಿಯಾಗಿ ಸಾವನ್ನಪ್ಪಿದ್ದ ಸುರೇಶ್ ಅಂಗಡಿ ಅವರ ಸ್ಥಾನಕ್ಕೆ ಚಿತ್ರದುರ್ಗದ ಎಡಗೈ ದಲಿತ ಸಂಸದ ಎ ನಾರಾಯಣಸ್ವಾಮಿ ಅವರನ್ನ ಸೇರಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಆದರೆ, ಎಲ್ಲಿಯೂ ಯಾರೂ ಅಧಿಕೃತವಾಗಿ ಇದನ್ನ ಹೇಳಿಲ್ಲ. ಆದರೆ, ನಾರಾಯಣ ಸ್ವಾಮಿ ಅವರು ತಮ್ಮ ಕುಟುಂಬ ಸಮೇತ ದೆಹಲಿಗೆ ದೌಡಾಯಿಸಿರುವುದು ಅವರಿಗೆ ಸಚಿವ ಸ್ಥಾನ ಸಿಗಲಿರುವ ಸುದ್ದಿಯನ್ನು ಪುಷ್ಟೀಕರಿಸುವಂತಿದೆ. ಇದೇ ವೇಳೆ, ಡಿ ವಿ ಸದಾನಂದ ಗೌಡ ಅವರನ್ನ ಸಂಪುಟದಿಂದ ಕೈಬಿಡುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಡಿವಿಎಸ್ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ಕೊಡಲು ಮೋದಿ ಸರ್ಕಾರ ನಿರ್ಧರಿಸಿದೆ ಎಂಬ ಸುದ್ದಿಯೂ ಇದೆ. ಇದಕ್ಕೆ ಇಂಬು ಕೊಡುವಂತೆ ಶೋಭಾ ಕರಂದ್ಲಾಜೆ ಅವರು ದೆಹಲಿಗೆ ಧಾವಿಸಿ ಅಲ್ಲಿ ಪ್ರಧಾನಿ ಮೋದಿ ನಿವಾಸಕ್ಕೆ ತೆರಳಿರುವ ಖಚಿತ ಸುದ್ದಿ ಇದೆ. ಹೀಗಾಗಿ, ಶೋಭಾ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂದು ಬಲವಾಗಿ ನಂಬಬಹುದು.

ಸದ್ಯ ಕೇಂದ್ರದಲ್ಲಿ ಸುರೇಶ್ ಅಂಗಡಿ ಸಚಿವರಾಗಿದ್ದಾಗ ಮೂವರು ಕೇಂದ್ರ ಸಚಿವರಿದ್ದರು. ಪ್ರಹ್ಲಾದ್ ಜೋಷಿ ಹಾಗೂ ಡಿವಿ ಸದಾನಂದ ಗೌಡ ಇನ್ನಿಬ್ಬರು ಸಚಿವರು. ದಲಿತ ಸಮುದಾಯದ ಸುರೇಶ್ ಅಂಗಡಿ ಅವರ ಸ್ಥಾನಕ್ಕೆ ದಲಿತರೇ ಆದ ಎ ನಾರಾಯಣಸ್ವಾಮಿ ಅವರಿಗೆ ಅವಕಾಶ ನೀಡುವುದು ಸಹಜವಾಗಿಯೇ ಇದೆ. ಹಾಗೆಯೇ ಒಕ್ಕಲಿಗ ಸಮುದಾಯದ ಡಿವಿ ಸದಾನಂದ ಗೌಡ ಅವರನ್ನ ಸಂಪುಟದಿಂದ ಕೈಬಿಟ್ಟರೆ ಅದೇ ಸಮುದಾಯದ ಇನ್ನೊಬ್ಬ ಸಂಸದರಿಗೆ ಸಚಿವ ಸ್ಥಾನ ಕೊಡುವುದು ನಿರೀಕ್ಷಿತ. ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಬಿಜೆಪಿ ಸಂಸದರೆಂದರೆ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಮತ್ತು ಬಿಎನ್ ಬಚ್ಚೇಗೌಡ ಈ ಮೂವರು ಮಾತ್ರವೇ. ಬಚ್ಚೇಗೌಡರಿಗೆ ವಯಸ್ಸಿನ ಕಾರಣಕ್ಕೆ ಸಚಿವ ಸ್ಥಾನ ಕೊಡುವುದು ಕಷ್ಟ. ಇನ್ನುಳಿದವರಾದ ಶೋಭಾ ಕರಂದ್ಲಾಜೆ ಮತ್ತು ಪ್ರತಾಪ್ ಸಿಂಹ ಪೈಕಿ ಯಾರಿಗಾದರೂ ಕೊಡಬಹುದು. ಆದರೆ, ಡಿವಿಎಸ್ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸೂಕ್ತ ಎನಿಸುತ್ತದೆ. ಅಲ್ಲದೇ, ಶೋಭಾ ಕರಂದ್ಲಾಜೆ ಅವರು ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಅತ್ಯಾಪ್ತರೂ ಹೌದು. ಬೆಂಗಳೂರಿನಲ್ಲಿ 15 ವರ್ಷಗಳಿಂದ ಮರಗಿಡ ಪೋಷಿಸುತ್ತಿರುವ ‘ಮಿಂಚು ತಿಮ್ಮಕ್ಕ’ ಶೈಲಜಾ

ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಸ್ಥಾನ ನೀಡಿ ಯಡಿಯೂರಪ್ಪ ಅವರ ಅಸಮಾಧಾನವನ್ನು ಒಂದಷ್ಟು ಶಮನ ಮಾಡುವ ದೂರಾಲೋಚನೆ ಬಿಜೆಪಿ ವರಿಷ್ಠರಿದ್ದಿರಬಹುದು. ಆದರೆ, ಎ ನಾರಾಯಣಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂಬ ಮಾಹಿತಿ ಅಧಿಕೃತವಾಗಿ ಎಲ್ಲಿಯೂ ಸಿಕ್ಕಿಲ್ಲ. ನ್ಯೂಸ್18 ಕನ್ನಡಕ್ಕೆ ಸಿಕ್ಕಿರುವ ಸಂಭಾವ್ಯ ಪಟ್ಟಿಯಲ್ಲಿ 24 ಮಂದಿ ಹೆಸರಿದ್ದು, ಅದರಲ್ಲಿ ಶೋಭಾ ಕರಂದ್ಲಾಜೆ ಹೆಸರಿದೆ. ಆದರೆ, ಎ ನಾರಾಯಣಸ್ವಾಮಿ ಅವರ ಹೆಸರು ಅದರಲ್ಲಿ ಕಾಣಸಿಕ್ಕಿಲ್ಲ. ಇದೇನೇ ಇದ್ದರೂ ಸಂಪುಟ ರಚನೆ, ಚುನಾವಣಾ ಅಭ್ಯರ್ಥಿ ಇತ್ಯಾದಿ ವಿಚಾರದಲ್ಲಿ ಬಿಜೆಪಿ ಬಹಳ ರಹಸ್ಯ ಕಾಪಾಡಿಕೊಳ್ಳುವುದರಿಂದ ಸಂಜೆ 5ರವರೆಗೆ ಯಾವುದನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ. ನಾವು ಊಹಿಸದೇ ಇದ್ದ ಹೆಸರು ದಿಢೀರ್ ಕೇಳಿಬರಬಹುದು.

ಇನ್ನು, ನರೇಂದ್ರ ಅವರ ಹೊಸ ಮಂತ್ರಿಮಂಡಲದಲ್ಲಿ ಮಹಿಳೆಯರು, ಹಿಂದುಳಿದ ವರ್ಗ ಮತ್ತು ದಲಿತ ವರ್ಗಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿದೆ ಎಂಬ ಮಾಹಿತಿ ಕೇಳಿಬರುತ್ತಿದೆ. ಅದರಲ್ಲೂ ಯುವಸಮುದಾಯಕ್ಕೆ ಹೆಚ್ಚಿನ ಮಣೆ ಹಾಕಲಾಗುತ್ತದೆ ಎನ್ನಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ