Breaking News

ಕಾರು-ಆಟೋ ಮಧ್ಯೆ ಭೀಕರ ಅಪಘಾತ; ಓರ್ವ ಮಹಿಳೆ ಸ್ಥಳದಲ್ಲೇ ಸಾವು

Spread the love

ಹಾವೇರಿ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೌದಿಕಲ್ಲಾಪುರ ಕ್ರಾಸ್​ ಬಳಿ ನಡೆದಿದೆ.

ಲಕ್ಷ್ಮವ್ವ ಕಲ್ಲೇಡಿ 55 ಮೃತ ದುರ್ದೈವಿಯಾಗಿದ್ದು ಇನ್ನುಳಿದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಮಾರ್ಗವಾಗಿ ಕಾಗಿನೆಲೆಗೆ ಹೋಗುತ್ತಿದ್ದ ಕಾರು ಮತ್ತು ಹಾವೇರಿಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ. ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ