ಕಾರವಾರ: 150 ಕೋಟಿ ರೂ. ವೆಚ್ಚದ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ರಾಜಕಾರಣಿಯೋರ್ವರು ಪರ್ಸಂಟೇಜ್ ಕೇಳುತ್ತಿರುವ ಕಾರಣ ಕಾಮಗಾರಿ ನೆನಗುದಿಗೆ ಬಿದ್ದಿದೆ ಎಂದು ಹೇಳಿರುವ ಮಾಜಿ ಸಚಿವರ ಹೇಳಿಕೆಗೆ ಶಾಸಕಿ ರೂಪಾಲಿ ನಾಯ್ಕರೇ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ ಅವರ ಆರೋಪ ಆಧಾರ ರಹಿತವಾಗಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ನಾಗರಾಜ್ ನಾಯ್ಕ ಹೇಳಿದ್ದು, ಮಾಧವ ನಾಯ್ಕ ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದರು.
ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಕಾರವಾರದ ಮೆಡಿಕಲ್ ಕಾಲೇಜಿಗೆ ಮಂಜೂರಾಗಿದ್ದ 150 ಕೋಟಿ ರೂ. ವೆಚ್ಚದ ಆಸ್ಪತ್ರೆ ಕಾಮಗಾರಿಯಲ್ಲಿ ಶಾಸಕಿ ರೂಪಾಲಿ ನಾಯ್ಕ ಪರ್ಸಂಟೇಜ್ ರಾಜಕಾರಣ ನಡೆಸಿದ ಕಾರಣಕ್ಕೆ ವಿಳಂಬವಾಗುತ್ತಿದೆ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯ್ಕ್ ಅವರು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿರುವುದಾಗಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಅಸಲಿಯಾಗಿ ಮಾಜಿ ಸಚಿವರು ಶಾಸಕರ ಹೆಸರನ್ನು ಎಲ್ಲಿಯೂ ಹೇಳಿಲ್ಲ. ರಾಜಕಾರಣಿಯೋರ್ವರು ಎಂದು ಹೇಳಿದ್ದಾರೆ. ಆದರೆ ಮಾಧವ ನಾಯ್ಕ ಅವರು ಶಾಸಕರು ಹೆಸರನ್ನು ಹೇಳಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಇದನ್ನು ಜಿಲ್ಲಾ ಬಿಜೆಪಿ ಉಗ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ.