Breaking News

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಕಾಂಗ್ರೆಸ್ ಸೈಕಲ್ ರ‍್ಯಾಲಿ

Spread the love

ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ‍್ಯಾಲಿ  ನಡೆಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ ಜಾರಕಿಹೊಳಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ  ಹಾಗೂ ಇಂಧನ ಬೆಲೆ ಏರಿಕೆ ಕೂಡಲೇ ಕಡಿಮೆ ಮಾಡಬೇಕೆಂದು ಆಗ್ರಹಿಸಿ, ಕಾಂಗ್ರೆಸ್ ಭವನ  ಆವರಣದಲ್ಲಿ ಕಟ್ಟಿಗೆ ಒಲೆ ಮೇಲೆ ” ಚಹಾ ” ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಕೊರೋನಾದಿಂದ ಉದ್ಯೋಗ ಕಳೆದುಕೊಂಡು ಕೋಟ್ಯಾಂತರ ಯುವಕರು  ಮನೆಯಲ್ಲಿದ್ದಾರೆ. ಈ ಸಂದಿಗ್ದ  ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಕಡು ಬಡವರು ಜೀವನ ನಡೆಸುವುದು ಕಷ್ಟಕರವಾಗಿದೆ. ಈ ದುರಾಡಳಿತ ಸರ್ಕಾರವನ್ನು ಕಿತ್ತೆಸೆಯಬೇಕೆಂದು ಎಂದು ಕಿಡಿ ಕಾರಿದರು.
ಶಾಸಕರಾದ  ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಅಂಜಲಿ ನಿಂಬಾಳಕರ್ ಹಾಗೂ ರಾಜು ಶೇಠ್, ವಿನಯ ನಾವಲಗಟ್ಟಿ, ಸುನೀಲ್ ಹನ್ನಮ್ಮಣವರ, ಬಾಬಾಸಾಹೇಬ ಪಾಟೀಲ, ಜಯಶ್ರೀ ಮಾಳಗಿ,  ವಿಜಯ ಕುಮಾರ್‌ ಹುಣಶ್ಯಾಳ, ಕಲ್ಲಪ್ಪ ವಕ್ಕಾರ್, ಬಾಳೇಶ ದಾಸನಟ್ಟಿ, ಐಷಯಾ ಸನದಿ,  ಹಾಗೂ  ನೂರಾರು ಕಾರ್ಯಕರ್ತರು ಸೈಕಲ್‌   ರ‍್ಯಾಲಿ ಭಾಗಿಯಾಗಿದ್ದರು.

Spread the love

About Laxminews 24x7

Check Also

ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ. ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ

Spread the love ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ವಿಚಾರ ಕುಂದಾನಗರಿ ಬೆಳಗಾವಿಯಲ್ಲಿ ಧರ್ಮಸ್ಥಳ ಭಕ್ತರಿಂದ ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ