Breaking News

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬದಲಾಗಿ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಿ: ಕೋರೆ ಆಗ್ರಹ

Spread the love

ಬೆಳಗಾವಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ರಾಜ್ಯ ಸರ್ಕಾರವು ಮರು ನಾಮಕರಣ ಮಾಡಿ ಆದೇಶ ಹೊರಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಹರ್ಷವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತ, ಹೈದ್ರಾಬಾದ್-ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣವಾದ ಮೇಲೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆಯ ಹೆಸರನ್ನು ಬದಲಾಯಿಸಿ ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ಮರುನಾಮಕರಣ ಮಾಡಿರುವುದು ಅತ್ಯಂತ ಸೂಕ್ತವೆನಿಸಿದೆ. ಈ ಭಾಗದ ಜನತೆಯ ಬಹುದಿನಗಳ ಕನಸು ನನಸಾಗಿದೆ. ಕ್ರಮ ಕೈಗೊಂಡು ಆದೇಶವನ್ನು ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹಾಗೂ ಸಾರಿಗೆ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾಗಿರುವ ಲಕ್ಷ್ಮಣ ಸವದಿಯವರಿಗೆ ವೈಯಕ್ತಿಕವಾಗಿ ಹಾಗೂ ನಾಡಿನ ಜನತೆಯ ಪರವಾಗಿ ಅನಂತ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ