Breaking News

ಬಾಗಲಕೋಟೆಯಲ್ಲಿ ಭಾರೀ ಮಳೆ.. ರಾತ್ರಿಯೆಲ್ಲಾ ನಿದ್ದೆಯಿಲ್ಲದೇ ಕಳೆದ ಜನ

Spread the love

ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲ್ಲೂಕಿನ ವಿವಿಧ ಕಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆ ನೀರು ಕುಳಗೇರಿ ಕ್ರಾಸ್​​ನಲ್ಲಿರುವ ನಾಲ್ಕೈದು‌ ಮನೆಗಳಿಗೆ ನುಗ್ಗಿದೆ. ಅಸ್ಲಮ್‌ ದಾಸ್ಯಾಳ ಎಂಬುವವರ ಮನೆ ಸೇರಿದಂತೆ ಐದು‌ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಪಾತ್ರೆ-ಪಗಡೆ, ಮನೆಯಲ್ಲಿರುವ ವಿವಿಧ ವಸ್ತುಗಳು ಜಲಾವೃತಗೊಂಡಿದ್ದವು. ಹೀಗಾಗಿ ಬುಟ್ಟಿ, ಬಕೆಟ್ ನಿಂದ ನಿವಾಸಿಗಳು ನೀರನ್ನು ರಾತ್ರಿಯಿಂದ ಬೆಳಗ್ಗೆವರೆಗೂ ಹೊರ ಹಾಕಿದ ಪ್ರಸಂಗ ಕೂಡ ನಡೆದಿದೆ. ಮಳೆ ಬಂದಾಗೆಲ್ಲಾ ಚರಂಡಿ ನೀರು ಮನೆಗೆ ನುಗ್ಗುತ್ತೆ. ಈ ಬಗ್ಗೆ ಗ್ರಾಪಂ ಸಿಬ್ಬಂದಿಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ ಅಂತಾ ನಿವಾಸಿಗಳು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ