ಬೆಂಗಳೂರು: ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ, 7 ಮಿನಿಸ್ಟರ್ ಮನೆ ಪಡೆಯಲು ಮತ್ತು ಕಾರಿನಲ್ಲಿ ಒಡಾಡಲು ನನ್ನ ಕೊಡುಗೆಯಿದೆ ಎಂದು ರೇಣುಕಾಚಾರ್ಯ ವಿರುದ್ಧ ಹೇಳಿಕೆ ನೀಡಿದ್ದ ಯೋಗೇಶ್ವರ್ ಗೆ ವ್ಯಂಗ್ಯವಾಗಿ ರೇಣುಕಾಚಾರ್ಯ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ನಮಗೆ ಜಗದ್ಗುರುಗಳಿದ್ದ ಹಾಗೇ. ನಮ್ಮ ಕ್ಷೇತ್ರದ ಅಭಿವೃದ್ಧಿಯಾಗಿದೆ ಅಂದರೆ, ನಾನು ಶಾಸಕನಾಗಿದ್ದೇನೆ ಅಂದರೆ, ಹಿಂದೆ ಅಬಕಾರಿ ಸಚಿವನಾಗಿದ್ದೇನೆ ಅಂದ್ರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ ಅಂದ್ರೆ ಅದಕ್ಕೆಲ್ಲ ಆ ಜಗದ್ಗುರುಗಳೇ ಕಾರಣ. ಪಕ್ಷ ಕಟ್ಟುವಲ್ಲಿ ಅವರ ಪಾತ್ರ ಬಹಳಷ್ಟು ದೊಡ್ಡದಿದೆ. ಹೀಗಾಗಿ ಅವರು ತುಂಬಾ ದೊಡ್ಡವರು. ಅವರ ಆಶೀರ್ವಾದಿಂದ ನಾನು 7 ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದೇನೆ ಎಂದು ವ್ಯಂಗ್ಯವಾಡಿದರು.
ಅವರ ಮೇಲೆ ಟೀಕೆ ಮಾಡಿದರೆ ಅವರ ಮೂರನೇ ದೃಷ್ಟಿ ನನ್ನ ಮೇಲೆ ಬಿಳುತ್ತದೆ. ಅವರ ಮೂರನೇ ಕಣ್ಣು ಬಿಟ್ಟರೆ ನಾನು ಭಸ್ಮವಾಗಿ ಬಿಡುತ್ತೇನೆ. ಅವರ ಆಶೀರ್ವಾದದಿಂದ ನಾನು ಕಾರಿನಲ್ಲಿ ಒಡಾಡುತ್ತಿದ್ದೇನೆ. ಅವರನ್ನು ನಾನು ಪರಮಾತ್ಮ ಸ್ಥಾನದಿಂದ ನೋಡುತ್ತಿದ್ದೇನೆ. ಹೀಗಾಗಿ ಅವರ ಕೆಂಗಣ್ಣಿಗೆ ಗುರಿಯಾಗಲು ನಾನು ಇಷ್ಟಪಡುವುದಿಲ್ಲ ಎಂದು ಟೀಕಿಸಿದರು.