Breaking News

ನಟ ರಕ್ಷಿತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಮಾತು ಖಂಡಿಸಿ ಕಾಪು ಬಂಟರ ಸಂಘದ ವತಿಯಿಂದ ದೂರು

Spread the love

ಕಾಪು : ಪ್ರತಿಭಾನ್ವಿತ ನಟ ಮತ್ತು ನಿರ್ದೇಶಕ, ತುಳುನಾಡಿನ ಹೆಮ್ಮೆಯ ಕಲಾವಿದ ರಕ್ಷಿತ್ ಶೆಟ್ಟಿ ಅಲೆವೂರು ಅವರ ಕುರಿತಾಗಿ ಖಾಸಗಿ ಟಿವಿ ಮಾಧ್ಯಮದಲ್ಲಿ ಅವಹೇಳನಕಾರಿ ಮತ್ತು ಹೀನಾಯವಾಗಿ ನಿಂದಿಸಿರುವ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಾಪು ಬಂಟರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಕಾಪು ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ತಳುನಾಡಿನ ಅದ್ಭುತ ಪ್ರತಿಭೆಯಾಗಿರುವ ರಕ್ಷಿತ್ ಶೆಟ್ಟಿ ಅವರು ಸಚ್ಛಾರಿತ್ರ್ಯ ಹೊಂದಿರುವ ವ್ಯಕ್ತಿಯಾಗಿದ್ದು, ಅವರ ಮೇಲೆ ಅನಗತ್ಯ ಆರೋಪಗಳನ್ನು ಮಾಡಿ ನಿಂದಿಸಿರುವುದು ಖಂಡನೀಯವಾಗಿದೆ. ಅವರ ಮೇಲೆ ಸುಳ್ಳು ಆಪಾದನೆಗಳನ್ನು ಮಾಡಿ ಚಿತ್ರರಂಗದಿಂದಲೇ ದೂರ ಸರಿಸುವ ಪ್ರಯತ್ನ ಮತ್ತು ತಂತ್ರಗಾರಿಕೆ ನಡೆಯುತ್ತಿದ್ದು, ಈ ಷಡ್ಯಂತ್ರದ ವಿರುದ್ಧ ಬಂಟ ಸಮುದಾಯ ಒಗ್ಗೂಡಿ ಹೋರಾಟ ನಡೆಸಲಿದೆ ಎಂದರು. ಕಾಪು ಬಂಟರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಽಕ್ಷಕ ಕುಮಾರಚಂದ್ರ ಅವರ ಮೂಲಕವಾಗಿ ಖಂಡನಾ ನಿರ್ಣಯದ ಪ್ರತಿಯೊಂದಿಗೆ ಉಡುಪಿ ಎಸ್ಪಿಯವರಿಗೆ ಮನವಿ ನೀಡಲಾಗಿದ್ದು, ರಕ್ಷಿತ್ ಶೆಟ್ಟಿ ಅವರ ವಿರುದ್ಧ ತೇಜೋವಧೆಗೆ ಯತ್ನಿಸಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಕಾಪು ಬಂಟರ ಸಂಘದ ಉಪಾಧ್ಯಕ್ಷರಾದ ರವಿರಾಜ್ ಶೆಟ್ಟಿ ಪಂಜಿತ್ತೂರುಗುತ್ತು, ಬಾಲಕೃಷ್ಣ ಶೆಟ್ಟಿ ದೊರಕಳಗುತ್ತು, ರತ್ನಾಕರ ಶೆಟ್ಟಿ ನಡಿಕೆರೆ, ಪ್ರಧಾನ ಕಾರ್ಯದರ್ಶಿ ಕೆ. ಲೀಲಾಧರ ಶೆಟ್ಟಿ, ಜತೆ ಕಾರ್ಯದರ್ಶಿ ನಿರ್ಮಲ್ ಕುಮಾರ್ ಹೆಗ್ಡೆ, ಕೋಶಾಽಕಾರಿ ರತ್ನಾಕರ ಹೆಗ್ಡೆ, ಜತೆ ಕಾರ್ಯದರ್ಶಿ ಯೋಗೀಶ್ ಶೆಟ್ಟಿ, ಮಹಿಳಾ ಘಟಕದ ಸಂಚಾಲಕಿ ಜಯಲಕ್ಷ್ಮೀ ಎಸ್. ಶೆಟ್ಟಿ, ಪದಾಽಕಾರಿಗಳಾದ ಶಾಂತಲತಾ ಎಸ್. ಶೆಟ್ಟಿ, ದಿವಾಕರ ಬಿ. ಶೆಟ್ಟಿ., ದಿವಾಕರ ಡಿ. ಶೆಟ್ಟಿ, ಪ್ರಭಾತ್ ಶೆಟ್ಟಿ, ರಾಜೇಶ್ ಶೆಟ್ಟಿ, ಕರುಣಾಕರ ಶೆಟ್ಟಿ, ದಯಾನಂದ ಶೆಟ್ಟಿ ದೆಂದೂರು ಮೊದಲಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

‘ಪಡಿತರ ಅಕ್ರಮ ತಡೆಗೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ’: ಗ್ಯಾರಂಟಿ ಅನುಷ್ಠಾನ ಸಮಿತಿ ಸೂಚನೆ

Spread the loveಗಂಗಾವತಿ: “ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅನ್ನಭಾಗ್ಯ’ ಪಡಿತರ ಫಲಾನುಭವಿಗಳಿಗೆ ತಲುಪದೇ ಬಹುತೇಕ ಧಾನ್ಯ ಕಳ್ಳರ ಪಾಲಾಗುತ್ತಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ