Breaking News

ಅಶೋಕ್ ಪಿಎ ವಿರುದ್ಧ ಲಂಚದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅಮಾನತು

Spread the love

ಚಿಕ್ಕಮಗಳೂರು: ಕಂದಾಯ ಸಚಿವ ಆರ್.ಅಶೋಕ್ ಪಿಎ ವಿರುದ್ಧ ಲಂಚ ಕೇಳಿದ್ದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

2005-06 ರಲ್ಲಿ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚೆಲುವರಾಜ್ ಕರ್ತವ್ಯ ಲೋಪ ಮಾಡಿದ್ದರು ಎಂಬ ಕಾರಣಕ್ಕಾಗಿ ಅಮಾನತು ಮಾಡಲಾಗಿದೆ. ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾ ಮಾಡಲಾಗಿದೆ.

 

ಮಂಡ್ಯದಲ್ಲಿ ಕೆಲಸ ಮಾಡುತ್ತದ್ದಾಗ ಸರ್ಕಾರಕ್ಕೆ ಸೇರಬೇಕಿದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಣ ಬ್ಯಾಂಕಿಗೆ ಸಂದಾಯವಾದ ಬಳಿಕ ಚಲನ್ ತಿದ್ದಿದ್ದ ಆರೋಪದಡಿ ದೂರು ದಾಖಲಾಗಿತ್ತು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾಗೊಳಿಸಿ ಶಿಸ್ತು ಪ್ರಾಧಿಕಾರ ಹಾಗೂ ನೋಂದಣಿ ಪರಿವೀಕ್ಷಕ ಮೋಹನ್ ರಾಜ್ ಆದೇಶಿಸಿದ್ದಾರೆ.

ಕೆಲ ತಿಂಗಳ ಹಿಂದೆ ಸಚಿವ ಆರ್.ಅಶೋಕ್ ಅವರ ಆಪ್ತ ಸಹಾಯಕ ತನ್ನಲ್ಲಿ ಲಂಚ ಕೇಳಿದ್ದರು ಎಂದು ಚೆಲುವರಾಜ್ ಆರೋಪಿಸಿದ್ದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ