Breaking News

ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ: ಡಾ.ಕೆ ಸುಧಾಕರ್

Spread the love

ದಾವಣಗೆರೆ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿಗಳಿವೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಜಿಲ್ಲಾಸ್ಪತ್ರೆಯ ಭೇಟಿಗಿಂತ ಮೊದಲು ಜಿಎಂಐಟಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರ ವರದಿ ಹೇಳುತ್ತಿದ್ದು, ಹಾಗಂತ ಯಾವ ಪೋಷಕರು ಮೈಮರೆಯುವಂತಿಲ್ಲ. ಲಾಕ್‍ಡೌನ್ ಸಡಿಲಿಕೆ ಆಗಿದೆ ಎಂದು ಜನರು ಕೂಡ ಮೈಮೆರಯುವಂತಿಲ್ಲ. ಪ್ರತಿಯೊಬ್ಬರು ಎರಡನೇ ಡೋಸ್ ಪಡೆಯುವವರೆಗೂ ಎಲ್ಲರೂ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್‍ಗಳ ಸಂಖ್ಯೆ ಹೆಚ್ಚಿದ್ದು, ಕೇರಳದಲ್ಲಿ ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಕೇಸ್ ಬರುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದ ಗಡಿಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ, ಕರ್ನಾಟಕದಲ್ಲಿ ಕೊರೊನಾ ಸಂಖ್ಯೆ ಇಳಿಮುಖವಾಗುತ್ತಿದೆ ಎಂದಿದ್ದಾರೆ.

ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. ಈ ಕುರಿತಾಗಿ ಪರಮಾರ್ಶೆ ಮಾಡಲಿಕ್ಕೆ ನಾನು ಇಂದು ದಾವಣಗೆರೆಗೆ ಬಂದಿದ್ದು, ದಾವಣಗೆರೆ ಅಲ್ಲದೇ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜ್ ನಿರ್ಮಾಣ ಆಗಲಿದೆ. ಈಗಾಗಲೇ ಸಿಎಂ ಯಡಿಯೂರಪ್ಪ ಅವರು ಸರ್ಕಾರದಿಂದ ಕಾಲೇಜ್ ಸ್ಥಾಪನೆಗೆ ನಿರ್ಧಾರಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿಯಲ್ಲಿ ಕಾಲೇಜ್ ನಿರ್ಮಾಣ ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ