Breaking News

ಉತ್ತರಕನ್ನಡದಲ್ಲಿ ಭಾರಿ Heavy rain ವರ್ಷಧಾರೆ : ಜನರಲ್ಲಿ ಆತಂಕ

Spread the love

ಕಾರವಾರ : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.

ಜಿಲ್ಲೆಯ ಕಾರವಾರ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ನಿನ್ನೆ ಮಧ್ಯಾಹ್ನದಿಂದ ಜಿಲ್ಲೆಯಲ್ಲಿ ವರ್ಷಧಾರೆ ಆರಂಭವಾಗಿದ್ದು, ಇಂದು ಕೂಡ ಮುಂದುವರೆದಿದೆ.

ಕಾರವಾರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಇನ್ನು ಅರಬ್ಬೀ ಸಮುದ್ರದಲ್ಲಿ ಕಡಲಬ್ಬರ ಜೋರಾಗಿದ್ದು ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲಾಡಳಿತ ಕಡಲತೀರಗಳಿಗೆ ಯಾರು ತೆರಳದಂತೆ ಸೂಚಿಸಿದೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ