Breaking News

ಬ್ಲಾಕ್ ಮೇಲ್ ಅಲ್ಲ, ವಂಚನೆ ಪ್ರಕರಣದ ರಹಸ್ಯ ಬಿಚ್ಚಿಟ್ಟ ನಟ ದರ್ಶನ್ ಹೇಳಿದ್ದೇನು ಗೊತ್ತಾ.?

Spread the love

ಮೈಸೂರು: ನಟ ದರ್ಶನ್ ಅವರ ಹೆಸರಲ್ಲಿ 25 ಕೋಟಿ ರೂಪಾಯಿ ಸಾಲ ಪಡೆಯಲು ಸ್ನೇಹಿತರು ಬ್ಯಾಂಕಿಗೆ ಅರ್ಜಿ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದರ್ಶನ್ ಬಳಿ ಬಂದು ವಿಚಾರಣೆ ನಡೆಸಿದ್ದಾರೆ.

ತಾನು ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡ ಮಹಿಳೆ ದರ್ಶನ್ ಬಳಿ ನಿಮ್ಮ ಹೆಸರಿನಲ್ಲಿ 25 ಕೋಟಿ ರೂಪಾಯಿಗಳನ್ನು ಪಡೆಯಲು ಅರ್ಜಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ದರ್ಶನ್ ಲೋನ್ ಗಾಗಿ ಯಾವುದೇ ಅರ್ಜಿ ಹಾಕಿಲ್ಲ. ಅವರ ಸ್ನೇಹಿತರು ಕೂಡ ಅರ್ಜಿ ಹಾಕಿಲ್ಲವೆನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ನೇಹಿತರಿಂದ ದರ್ಶನ್ ಅವರನ್ನು ದೂರ ಮಾಡಲು ಇಂತಹ ಷಡ್ಯಂತ್ರ ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಯಾವುದೇ ಹಣಕಾಸು ವ್ಯವಾರ ನಡೆಯದಿದ್ದರೂ ಮಹಿಳೆ ತಾನು ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ದರ್ಶನ್ ಬಳಿಗೆ ಬಂದಿದ್ದೇಕೆ ಎಂಬ ಕುರಿತು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ದರ್ಶನ್ ಅವರ ಶ್ಯೂರಿಟಿಯೊಂದಿಗೆ ಸ್ನೇಹಿತರಿಗೆ ಸಾಲ ನೀಡುವ ಕುರಿತು ಮಾಹಿತಿ ಪಡೆಯಲು ಬಂದಿದ್ದೇನೆ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡರೊಂದಿಗೆ ಮಹಿಳೆ ಬಂದಿದ್ದಾರೆ. ಆದರೆ, ಸಾಲಕ್ಕೆ ಯಾವುದೇ ಅರ್ಜಿ ಸಲ್ಲಿಸಿಲ್ಲ. ಯಾವುದೇ ಹಣಕಾಸು ವ್ಯವಹಾರ ಕೂಡ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ದರ್ಶನ್ ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಕಚೇರಿಗೆ ಆಗಮಿಸಿ ದರ್ಶನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಇಡೀ ಬೆಳವಣಿಗೆ ಗೊಂದಲದ ಗೂಡಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ದರ್ಶನ್ ಅವರೇ ಸ್ಪಷ್ಟಪಡಿಸುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ