ಬೆಂಗಳೂರು : ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಕ್ಲರ್ಕ್ ನೇಮಕ ಪರೀಕ್ಷೆಯನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಗ್ರಾಮೀಣ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆಗೆ ತಡೆ ನೀಡಲಾಗಿದೆ.
11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇವಲ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿತ್ತು. ಆದರೆ ಕನ್ನಡ ಸೇರಿದಂತೆ ಪ್ರಾದೇಶಿಕ ಪರೀಕ್ಷೆಗಳಲ್ಲಿ ಪರೀಕ್ಷೆ ಸಂಬಂಧ ತೀರ್ಮಾನಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಈ ವರದಿ ಬಂದ ಬಳಿಕ ಶಿಫಾರಸಿನ ಮೇರೆಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ರಾಜ್ಯ ಮೂಲದ ಕೆನರಾ ಬ್ಯಾಂಕ್ ನ ಒಟ್ಟು 682 ಹುದ್ದೆಗಳು ಸೇರಿದಂತೆ ಸುಮಾರು 3,300 ಕ್ಕೂ ಹೆಚ್ಚು ಹುದ್ದೆಗಳಿಗೆ ಈ ನೇಮಕ ನಡೆಯುತ್ತಿಇದ್ದು, ರಾಜ್ಯದಲ್ಲಿಯೇ 407 ಕ್ಲರ್ಕ್ ಹುದ್ದೆಗಳಿವೆ.