Breaking News

ಪ್ರವಾಹದ ಭೀತಿ ಹೆಚ್ಚಾಗಿದ್ದು ರಮೇಶ್ ಜಾರಕಿಹೊಳಿ, ಬೆಂಗಳೂರಿನಿಂದ ಬೆಳಗಾವಿ ಜಿಲ್ಲೆಗೆ……

Spread the love

ಬೆಂಗಳೂರು: ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಿಂದ ಪ್ರವಾಹದ ಭೀತಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲೆಗೆ ತೆರಳುವಂತೆ ಸಿಎಂ ಬಿಎಸ್ ವೈ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಗೆ ಸೂಚನೆ ನೀಡಿದ್ದಾರೆ.

ಇಂದು ಬೆಳಗ್ಗೆ ರಮೇಶ್ ಜಾರಕಿಹೊಳಿ ಜೊತೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಸಿಎಂ, ಬೆಳಗಾವಿಯಲ್ಲಿ ಯಾವುದೇ ಅನಾಹುತಗಳು ನಡೆಯಂತೆ ಎಚ್ಚರ ವಹಿಸಿ. ಸಂಪೂರ್ಣವಾಗಿ ಬೆಳಗಾವಿಯ ಮಳೆಯ ಅನಾಹುತಗಳು ನಮ್ಮ ಹಿಡಿತದಲ್ಲಿರಬೇಕು.

ಪ್ರವಾಹ ಪರಿಸ್ಥಿತಿಯನ್ನು ನಾವು ನಿಯಂತ್ರಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿ, ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಿ. ಜಿಲ್ಲಾಧಿಕಾರಿಗಳ ಬಳಿಯೂ ಚರ್ಚಿಸಿ ಎಂದು ಹೇಳಿದ್ದಾರೆ.

ಸಧ್ಯೆ ನೀವು ನಿಮ್ಮ ಜಿಲ್ಲೆಯಲ್ಲಿ ಇರಬೇಕು ಪ್ರವಾಹದ ಸ್ಥಿತಿಗಳನ್ನು ಸಮಸ್ಯೆಗಳನ್ನು ಅರಿಯಬೇಕು. ತಕ್ಷಣ ಜಿಲ್ಲೆಗೆ ತೆರಳುವಂತೆ ಸೂಚಿಸಿದ್ದಾರೆ.

ಈಗಾಗಲೇ ರಮೇಶ್ ಜಾರಕಿಹೊಳಿ, ಬೆಂಗಳೂರಿನಿಂದಲೇ ದೂರವಾಣಿ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಎಂ.ವಿ.ಹಿರೇಮಠ್ ಅವರಿಂದ ಮಳೆ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ