Breaking News
Home / ರಾಜಕೀಯ / ‘ಒಂದಾಗಿದ್ವಿ, ಒಂದಾಗಿರೋಣ’: ಒಟ್ಟಿಗೆ ಕಾಣಿಸಿಕೊಂಡ ದರ್ಶನ್-ಉಮಾಪತಿ

‘ಒಂದಾಗಿದ್ವಿ, ಒಂದಾಗಿರೋಣ’: ಒಟ್ಟಿಗೆ ಕಾಣಿಸಿಕೊಂಡ ದರ್ಶನ್-ಉಮಾಪತಿ

Spread the love

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಹೆಸರಿನಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ತೆರೆಬೀಳುವ ಸಾಧ್ಯತೆ ಇದೆ. ನಿನ್ನೆಯಿಂದ ಭಾರಿ ಸದ್ದು ಮಾಡಿದ್ದ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಇಬ್ಬರು ಫುಲ್‌ಸ್ಟಾಪ್ ಇಟ್ಟಿದ್ದಾರೆ. ಈ ಪ್ರಕರಣದಿಂದ ದರ್ಶನ್ ಮತ್ತು ಉಮಾಪತಿ ನಡುವಿನ ಸ್ನೇಹ ಸಂಬಂಧ ಮುರಿದು ಬಿತ್ತು ಎನ್ನುವ ಅನುಮಾನ ಎಲ್ಲರಲ್ಲೂ ಕಾಡಿತ್ತು.

ಆದರೀಗ ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳುವ ಒಂದಾಗಿದ್ವಿ, ಒಂದಾಗಿರೋಣ ಎಂಡಿದ್ದಾರೆ. ಮೈಸೂರಿನಿಂದ ಇಂದು ಬೆಂಗಳೂರಿಗೆ ಬಂದಿದ್ದ ದರ್ಶನ್ ನಿರ್ಮಾಪಕ ಉಮಾಪತಿ ಅವರನ್ನು ಭೇಟಿಯಾಗಿದ್ದಾರೆ. ಇಬ್ಬರು ಮಾತುಕತೆ ಮೂಲಕ ವಿವಾದ ಭಗೆಹರಿಸಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಬಳಿಕ ಇಬ್ಬರು ಒಟ್ಟಿಗೆ ಫೋಟೋ ಕ್ಲಿಕ್ಕಿಸಿಕೊಂಡು ಬೇರೆ ಆಗಿಲ್ಲ ಒಂದಾಗಿದ್ದೀವಿ ಎನ್ನುವ ಸಂದೇಶ ರವಾನಿಸಿದ್ದಾರೆ.

ಈ ಪ್ರಕರಣ ದೊಡ್ಡ ಮಟ್ಟಕ್ಕೆ ಚರ್ಚೆಯಾಗಲು ಪ್ರಾರಂಭಿಸುತ್ತಿದ್ದಂತೆ ದರ್ಶನ್ ಮತ್ತು ಸ್ನೇಹಿತರು ಪ್ರೆಸ್ ಮೀಟ್ ನಡೆಸಿ ಘಟನೆಯನ್ನು ವಿವರಿಸಿದ್ದರು. ಆರೋಪಿ ಅರುಣಾ ಕುಮಾರಿ ಯಾರು ಎನ್ನುವುದನ್ನು ಬಿಚ್ಚಿಟ್ಟಿದ್ದರು. ಬಳಿಕ ಎಲ್ಲಾ ಕಡೆಯಿಂದ ನಿರ್ಮಾಪಕ ಉಮಾಪತಿ ಹೆಸರು ಕೇಳಿಬರುತ್ತಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದರು. ಆದರೆ ಎಲ್ಲೂ ಉಮಾಪತಿ ವಿರುದ್ಧ ಆರೋಪ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇದರ ಬೆನ್ನಲ್ಲೇ ಪ್ರೆಸ್ ಮೀಟ್ ನಡೆಸಿದ್ದ ಉಮಾಪತಿ ದರ್ಶನ್ ಸ್ನೇಹಿತರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇಂದು ಮತ್ತೆ ಪ್ರೆಸ್ ಮೀಟ್ ನಡೆಸಿದ್ದ ನಿರ್ಮಾಪಕ ಉಮಾಪತಿ, ಆರೋಪಿ ಅರುಣಾ ಕುಮಾರಿ ಮತ್ತು ದರ್ಶನ್ ಸ್ನೇಹಿತರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆದರೆ ಎಲ್ಲಿಯೂ ದರ್ಶನ್ ಅವರ ಬಗ್ಗೆ ಮಾತನಾಡಿರಲಿಲ್ಲ. ಇಬ್ಬರ ಸ್ನೇಹ ಚೆನ್ನಾಗಿಯೇ ಇದೆ, ಸ್ನೇಹ ಮುರಿದು ಬಿತ್ತು ಅಂತ ಖುಷಿ ಪಡಬೇಡಿ ಎಂದು ಹೇಳಿದ್ದರು.

ಈ ಎಲ್ಲಾ ಬೆಳವಣಿಗೆ ಬಳಿಕ ದರ್ಶನ್ ಮತ್ತು ಉಮಾಪತಿ ಇಬ್ಬರು ಒಂದಾಗಿದ್ದೀವಿ ಎಂದು ಹೇಳುವ ಮೂಲಕ ಫೋಟೋವನ್ನು ಹಂಚಿಕೊಂಡಿದ್ದಾರೆ. ದರ್ಶನ್ ಮತ್ತು ಉಮಾಪತಿ ಇಬ್ಬರು ಒಂದಾಗಿದ್ದೀವಿ ಎಂದು ಫೋಟೋ ಹಂಚಿಕೊಳ್ಳುತ್ತಿದ್ದಂತೆ ಇತ್ತ ಆರೋಪಿ ಅರುಣಾ ಕುಮಾರಿ ರೊಚ್ಚಿಗೆದ್ದಿದ್ದಾರೆ.

ಖಾಸಗಿ ವಾಹಿನಿ ಜೊತೆ ಮಾತನಾಡಿದ ಅರುಣಾ ಕುಮಾರಿ, “ನಾನು ವಂಚಕಿ ಎನ್ನುವ ಹಣೆಪಟ್ಟಿ ಕಟ್ಟಿದ್ರು, ಇದಕ್ಕೆಲ್ಲ ಕಾರಣ ಉಮಾಪತಿ, ಅವರೇ ಎಲ್ಲ ಮಾಡಿಸಿದ್ದು. ನನಗೀಗ ಬದುಕಬೇಕು ಅನಿಸುತ್ತಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಪ್ರಕರಣ ಅಂತ್ಯವಾಯ್ತು ಎನ್ನುವಷ್ಟೊತ್ತಿಗೆ ಮತ್ತೊಂದು ತಿರುವು ಪಡೆಕೊಂಡಿದೆ. ಇದೀಗ ಇಲ್ಲಿಗೆ ಹೋಗಿ ಮುಟ್ಟುತ್ತೊ ಕಾದು ನೋಡಬೇಕು.


Spread the love

About Laxminews 24x7

Check Also

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್‌

Spread the loveಬೆಂಗಳೂರು, (ಮಾರ್ಚ್ 28): ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ