ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರದಲ್ಲಿರುವ ಕೆಪಿಟಿಸಿಎಲ್ ಎಇಇ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಎಂಬ ಕೆಪಿಟಿಸಿಎಲ್ ಕಚೇರಿಯ ಎಇಇ ಮನೆ ಮೇಲೆ ದಾಳಿ ನಡೆಸಿದ್ದಾರೆ.
ವಿಜಯಪುರ ನಗರದ ಸುಕೂನ್ ಲೇಔಟ್ ನಲ್ಲಿರುವ ಕೆಪಿಟಿಸಿಎಲ್ ಎಇಇ ಸಿದ್ದರಾಮ ಬಿರಾದಾರಗೆ ಸೇರಿದ ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ, ಬಿ.ಕೆ.ಲೋಣಿ ಗ್ರಾಮದ ಮನೆ, ತೋಟದ ಮನೆ ಮಾತ್ರವಲ್ಲದೇ ಸಿದ್ದರಾಮ ಅಳಿಯ ಅರ್ಜುನ ಬಿರಾದಾರ್ ಮನೆ ಮೇಲೂ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು, ದಾಖಲೆ ಪರಿಶೀಲನೆ ಮುಂದುವರೆಸಿದ್ದಾರೆ.
ಎಸಿಬಿ ಡಿಎಸ್ಪಿ ಮಂಜುನಾಥ ಗಂಗಲ್ ನೇತೃತ್ವದಲ್ಲಿ ವಿಜಯಪುರ ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಎಸಿಬಿ ಇನ್ಸಪೆಕ್ಟರ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Laxmi News 24×7