Breaking News

ಸುಮಲತಾ ಹೋರಾಟಕ್ಕೆ ರೈತ ಸಂಘದಿಂದ ಸಂಪೂರ್ಣ ಬೆಂಬಲ: ಚಾಮರಸ ಮಾಲಿಪಾಟೀಲ್

Spread the love

ರಾಯಚೂರು: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಹೋರಾಟಕ್ಕೆ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಚಾಮರಸ ಮಾಲಿಪಾಟೀಲ್‍ರವರು, ರಾಜ್ಯದ ಹಲವೆಡೆ ಅಕ್ರಮ ಕಲ್ಲುಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ಬೇಬಿಬೆಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಅದೂ ಕೆಆರ್‍ಎಸ್ ನಿಂದ 5-6 ಕಿ.ಮೀನಲ್ಲಿ ಗಣಿಗಾರಿಕೆ ನಡೆಯುತ್ತಿದೆ. 20 ಕಿ.ಮೀ ಒಳಗೆ ಗಣಿಗಾರಿಕೆ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಈ ಹಿಂದೆ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತ ಸಂಘ ಹೋರಾಟ ಮಾಡಿದಾಗ ಬಂದ್ ಆಗಿತ್ತು ಎಂದಿದ್ದಾರೆ.

ಕೆಲವರು ಕನ್ನಂಬಾಡಿ ಕಟ್ಟೆ ಬಿರುಕು ಬಿಟ್ಟಿದೆ ಅಂತ ಹೇಳಬಹುದು, ಕೆಲವರು ಇಲ್ಲ ಎನ್ನಬಹುದು. ಆದರೆ ಅಣೆಕಟ್ಟಿನ ಅಯುಷ್ಯ ಮಾತ್ರ ಖಂಡಿತ ಕಡಿಮೆಯಾಗುತ್ತದೆ. 100 ವರ್ಷದ ಆಯುಷ್ಯ 50 ವರ್ಷಕ್ಕೆ ಮುಗಿಯುತ್ತದೆ. ರೈತ ಸಂಘ ಹಿಂದೆ ಮಾಡಿದ ಹೋರಾಟವನ್ನು ಈಗ ಸುಮಲತಾ ಮಾಡುತ್ತಿದ್ದಾರೆ, ಸುಮಲತಾ ಹೋರಾಟಕ್ಕೆ ರೈತ ಸಂಘ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ತಿಳಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಮಾಜಿ ಸಿಎಂ ಆಗಿ ಜವಾಬ್ದಾರಿಯಿಂದ ಮಾತನಾಡಬೇಕು. ಒಬ್ಬ ಮಹಿಳಾ ಸಂಸದರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು. ಕುಮಾರಸ್ವಾಮಿ ತಮ್ಮ ಮಾತನ್ನು ವಾಪಸ್ ಪಡೆಯಬೇಕು. ಸಣ್ಣ ಮಾತುಗಳನ್ನು ಆಡಿ ಸಣ್ಣತನ ಪ್ರದರ್ಶನ ಮಾಡಬಾರದು ಅಂತ ಚಾಮರಸ ಮಾಲಿಪಾಟೀಲ್ ಹೇಳಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ