Breaking News

ಬೆಳಗಾವಿಯ ಹೊರ ವಲಯದಲ್ಲಿ ಕಂಟೇನರ್​ಗೆ ಲಾರಿ ಡಿಕ್ಕಿ

Spread the love

ಬೆಳಗಾವಿ: ಕಂಟೇನರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಹೊರ ವಲಯದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬಳಿಯ ವಂಟಮೂರಿ ಘಾಟ್‍ನಲ್ಲಿ ನಡೆದಿದೆ.

ಮಂಗಳವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಶಿಗ್ಗಾಂವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್, ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ಡಿವೈಡರ್ ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೀರಜ್ ಹಾಗೂ ರಾಜೇಂದ್ರ ಎಂಬ ಇಬ್ಬರು ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಂಟೇನರ್ ನ ಮೇಲ್ಭಾಗ ಕಿತ್ತು ಬಿದ್ದು, ಔಷಧಿ ತುಂಬಿಕೊಂಡು ನಿಂತಿದ್ದ ಕಂಟೇನರ್​ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ