Breaking News

ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್

Spread the love

ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಸಂಸತ್ತು ಮಕ್ಕಳಿಗೆ ಸಮಾನ ಸ್ಥಾನಮಾನ ನೀಡಿದೆ. ಹೀಗಾಗಿ ಕೆಪಿಟಿಸಿಎಲ್ ನ ನಿರ್ಬಂಧ ಕಾನೂನುಬಾಹಿರವೆಂದು ಪರಿಗಣಿಸಿ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಕನಕಪುರದ ಕೆ.ಸಂತೋಷ್ ಎಂಬುವವರು ಕೆಪಿಟಿಸಿಎಲ್​ನ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಜತೆಗೆ 2 ತಿಂಗಳಲ್ಲಿ ಅನುಕಂಪದ ನೌಕರಿಗೆ ಪರಿಗಣಿಸಲು ನ್ಯಾ.ಬಿ.ವಿ.ನಾಗರತ್ನ, ಹಂಚಟೆ ಸಂಜೀವ್ ಕುಮಾರ್ ಅವರುಗಳಿದ್ದ ಹೈಕೋರ್ಟ್​ನ ವಿಭಾಗೀಯ ಪೀಠ ಸೂಚನೆ ನೀಡಿದೆ.

ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್
ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​ ಗುರುವಾರ ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ