ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಭದ್ರಾವತಿ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಬಂಧಿತರನ್ನು ದಕ್ಷಿಣಾಮೂರ್ತಿ (37), ಸುದೀಪ್ ಕುಮಾರ್ (30), ಡ್ಯಾನಿಯಲ್ (25) ಕಿರಣ (23), ಪವನ್ ಕುಮಾರ್ (25), ನವೀನ್ (26) ಬಂಧಿತ ಆರೋಪಿಗಳು. ಗಾಂಜಾ ಮಾರಾಟ ಮಾಡುತ್ತಿದ್ದ ಇವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಜಿಲ್ಲೆಯ ಭದ್ರಾವತಿ ಹಳೆನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. 1 ಕೆ.ಜಿ. 350 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಭದ್ರಾವತಿಯ ಹಳೆಸೀಗೆಬಾಗಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಭದ್ರಾವತಿ ಹಳೆನಗರ ಠಾಣೆ ಪೊಲೀಸರು ಮಾಲು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.