Breaking News
Home / ರಾಜಕೀಯ / ರಾಜ್ಯಪಾಲರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ

ರಾಜ್ಯಪಾಲರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ

Spread the love

ಬೆಂಗಳೂರು, : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ರಾಜ್ಯಪಾಲರನ್ನು ರಾಜಭವನದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ಸಂಸದೆ ಸುಮಲತಾ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಲೂ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದರು. ಆ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿರುವ ಅವರು, “ರಾಜ್ಯಪಾಲರು ಹೊಸದಾಗಿ ಬಂದಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದೇನೆ” ಎಂದು ಹೇಳಿದ್ದಾರೆ.”ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿವರಿಸಿದ್ದೇನೆ. ಜೊತೆಗೆ ಕೆಆರ್‌ಎಸ್ ಅಣೆಕಟ್ಟು ಸಮೀಪ ಇರುವುದನ್ನೂ ಹೇಳಿದ್ದೇನೆ. ಈ ಬಗ್ಗೆ ಮನವಿಪತ್ರವೊಂದನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಕೊಡುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ” ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

ಇನ್ನು ಚಿತ್ರನಟ ದರ್ಶನ್ ಹಾಗೂ ಉಮಾಪತಿ ಅವರ ನಡುವೆ ಆಸ್ತಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮಾತನಾಡಿ, “ಪ್ರಕರಣದ ಬಗ್ಗೆ ನಾನು ಮಾತಾಡೋಕೆ ಇಷ್ಟ ಪಡುವಿದಿಲ್ಲ. ನಾನು ಅನಾವಶ್ಯಕವಾಗಿ ಹೇಳಿಕೆ ಕೊಡುವುದು ಸರಿಯಲ್ಲ. ಹೊಟೇಲ್‌ನಲ್ಲಿ ನಡೆದಿದೆ ಎನ್ನಲಾದ ಹಲ್ಲೆ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡೆದು ಸತ್ಯಾಂಶ ಹೊರಗೆ ಬರಲಿ. ಹಲ್ಲೆ ಪ್ರಕರಣ ಬಗ್ಗೆ ನನಗೇ ಗೊತ್ತಿಲ್ಲ, ನಾನು ನನ್ನ ಕೆಲಸದ ಕಡೆ ಗಮನ ಕೊಟ್ಟಿದ್ದೇನೆ” ಎಂದಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ