Breaking News

BIG NEWS: ಕಾಂಗ್ರೆಸ್ ಪಾಳಯದಲ್ಲಿ ಗರಿಗೆದರಿದ ಚಟುವಟಿಕೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಗೆ ರಾಹುಲ್ ಗಾಂಧಿ ಬುಲಾವ್

Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೈ ಶಾಸಕರ ಸಭೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿ ಎಲ್ ಪಿ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಬುಲಾವ್ ನೀಡಿದ್ದಾರೆ.

ದೆಹಲಿಗೆ ಬರುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಬುಲಾವ್ ನೀಡಿದ್ದು, ಹೈಕಮಾಂಡ್ ಆಹ್ವಾನದ ಮೇರೆಗೆ ಇಬ್ಬರು ನಾಯಕರು ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಮುಂಬರುವ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ, ಪಕ್ಷದಲ್ಲಿನ ಸಧ್ಯದ ಬೆಳವಣಿಗೆಗಳು ಹಾಗೂ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ನಾಯಕರ ಪೈಪೋಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ