Breaking News

ಐಷಾರಾಮಿ ಜೀವನಕ್ಕೆ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳು: 2 ಕೋಟಿಗೂ ಅಧಿಕ ಮೌಲ್ಯದ ಹ್ಯಾಷ್ ಆಯಿಲ್ ವಶಕ್ಕೆ

Spread the love

ನಗರದಲ್ಲಿ ಖಾಕಿ ಪಡೆಯ ಡ್ರಗ್ಸ್​ ಜಾಲದ ಬೇಟೆ ಮುಂದುವರೆದಿದೆ. ಇತ್ತೀಚೆಗೆ ಹೆಚ್ಚುತ್ತಿರುವ ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲಿಸ್ ಪಡೆ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಅದರ ಪರಿಣಾಮವಾಗಿ ದಿನವೂ ನಗರದಲ್ಲಿ ಬಹಳಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪೊಲೀಸರು ಮಾದಕ ವಸ್ತುಗಳ ಸಮೇತ ಆರೋಪಿಗಳನ್ನು ಸೆರೆಹಿಡಿಯುತ್ತಿದ್ದಾರೆ. ಇದೇ ಮಾದರಿಯಲ್ಲಿ ಇಂದು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಡ್ರಗ್ಸ್ ತರಿಸಿ ವಿದ್ಯಾರ್ಥಿಗಳು ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಅವರನ್ನು ಮೊಹಮ್ಮದ್ ಇರ್ಫಾನ್ ಹಾಗೂ ಥಾರಿ ಅಜೀಮ್ ಎಂದು ಗುರುತಿಸಲಾಗಿದೆ. ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿಗಳಿಂದ 2 ಕೋಟಿ ರೂ. ಮೌಲ್ಯದ 4 ಕೆಜಿ ಹಾಷಿಷ್ ಆಯಿಲ್(ಒಂದು ಮಾದರಿಯ ಮಾದಕ ದ್ರವ್ಯ)​ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಟೆಕ್ಕಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದರು ಎಂದು ತಿಳಿದು ಬಂದಿದೆ.

ಬೆಂಗಳೂರು ನಗರದ ಆಗ್ನೇಯದ ಮೈಕೊ ಲೇಔಟ್ ಉಪ ವಿಭಾಗದ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಆರೋಪಿಗಳಾದ ಮೊಹಮ್ಮದ್ ಇರ್ಫಾನ್​ 24 ಹಾಗೂ ಥಾರಿ ಅಜೀಮ್​ 26 ವರ್ಷದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ