Breaking News

ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರ ಪ್ರತ್ಯುತ್ತರ

Spread the love

ಬೆಂಗಳೂರು: ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಪ್ರತ್ಯುತ್ತರ ನೀಡಿದ್ದಾರೆ.

ಇಂದು (ಜುಲೈ 17) ಫೇಸ್ ಬುಕ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಪ್ರೇಮ್, ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ ಎಂದಿದ್ದಾರೆ.

ಪ್ರೇಮ್ ಹೇಳಿರುವ ಮಾತುಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ :

”ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಾಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ”.

ದರ್ಶನ್ ಹೇಳಿದ್ದೇನು ?

ನಿರ್ಮಾಪಕ ಉಮಾಪತಿ ವಿರುದ್ಧ ಆಕ್ರೋಶದಿಂದ ಮಾತನಾಡುತ್ತಿದ್ದ ವೇಳೆ ನಟ ದರ್ಶನ್ ಅವರು ಪ್ರೇಮ್ ಅವರ ಹೆಸರು ತೆಗೆದುಕೊಂಡಿದ್ದರು. ಸಿನಿಮಾ ವಿಚಾರವಾಗಿ ಉಮಾಪತಿ, ಪ್ರೇಮ್ ಹಾಗೂ ತಮ್ಮ ನಡುವೆ ನಡೆದ ಮಾತುಕತೆ ಬಹಿರಂಗವಾಗಿದ್ದನ್ನು ಪ್ರಸ್ತಾಪಿಸಿದ ದಚ್ಚು, ಪ್ರೇಮ್ ಏನು ಪುಡುಂಗುನಾ ಎಂದು ಪ್ರಶ್ನಿಸಿದ್ದರು.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ