Breaking News
Home / ಜಿಲ್ಲೆ / ಬೆಂಗಳೂರು / ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ’ : ನಟ ದರ್ಶನ್ ಗೆ ಜಗ್ಗೇಶ್ ಪರೋಕ್ಷ ಟಾಂಗ್!

ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ’ : ನಟ ದರ್ಶನ್ ಗೆ ಜಗ್ಗೇಶ್ ಪರೋಕ್ಷ ಟಾಂಗ್!

Spread the love

ಬೆಂಗಳೂರು : ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ. ನಮ್ಮನ್ನು ದಡ ಮುಟ್ಟಿಸಿದ್ದು ಅಂದಿನ ನಿರ್ದೇಶಕರು, ನಿರ್ಮಾಪಕರು, ಮಾಧ್ಯಮ ಮಿತ್ರರು ಹಾಗೂ ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು ಎಂದು ನಟ ದರ್ಶನ್ ಗೆ ನವರಸ ನಾಯಕ ಜಗ್ಗೇಶ್ ಟಾಂಗ್ ಕೊಟ್ಟಿದ್ದಾರೆ.

 

ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಹಾಕಿರುವ ಜಗ್ಗೇಶ್ ನಟ ದರ್ಶನ್ ಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. ತುಮಕೂರು ಜಿಲ್ಲೆಯ, ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ ಹೋಬಳಿಯ,ಆನಡುಗು ಎಂಬ ಸಣ್ಣ ಗ್ರಾಮದ, ಸಣ್ಣ ಕುಟುಂಬದ, ಹಳ್ಳಿಹುಡುಗ ನಾನು ಈಶ್ವರ್ ಗೌಡ ಜಗ್ಗೇಶ..!

ನನಗೆ ಇದ್ದ ಆಸೆ ರಾಜಕುಮಾರ್ ಕಂಡು ಮಾತಾಡಿಸಿ ಆಶೀರ್ವಾದ ಪಡೆದು ಸಿನಿಮ ನಟನಾಗ ಬೇಕು ಎಂಬುದು ಒಂದೆ ಗುರಿ!1980ಕ್ಕೆ ಆ ಕಾರ್ಯ ಶುರು,ಆಗ ಹೇಗಿದ್ದೆ ನಾನು ದಾಖಲಿಸಿರುವೆ ಚಿತ್ರಗಳಲ್ಲಿ ಮತ್ತೊಮ್ಮೆ ಮುಖ ನೋಡಿ ನಕ್ಕುಬಿಡಿ!ಆ ಮುಖಕ್ಕೆ ಆಕಾಲಕ್ಕೆ ಸಿನಿಮನಟ ಆಗುವ ಕನಸ್ಸು?ಈಗಿನ ಜಗ್ಗೇಶನ ಮರೆತು ಯೋಚಿಸಿ ಇದು ಸಾಧ್ಯವಾ?

 

ಆಗ ಅಪ್ಪಅಮ್ಮ ಬಂಧು ಮಿತ್ರರು ಹೇಳಿದ್ದು, ಉಗಿದದ್ದು ಹೀಗೆ ಮುಚ್ಕೊಂಡು ಅನ್ನ ಹುಡ್ಕೋ ಕ್ಯಾಮೆ ನೋಡು!ಶಿವಲಿಂಗಪ್ಪನ ಮರ್ಯಾದೆ ಉಳಿಸು ಮಂಗಮುಂಡೆದೆ ಎಂದು!

 

ಗುರುಹಿಂದೆ ಗುರಿಮಂದೆ ಹಠ ಬಿಡಲಿಲ್ಲಾ ಗಾಂಧಿನಗರ ಅಲೆದು ಚಪ್ಪಲಿಸವೆಸಿ ದಡಮುಟ್ಟಿದೆ ಎಂದುಬಿಟ್ಟರೆ ಆತ್ಮ ಧ್ರೋಹ ಆಗಿಬಿಡುತ್ತದೆ ಕಾರಣ ದಡಮುಟ್ಟಿಸಿದ್ದು ಅಂದಿನ ನಿರ್ದೇಶಕರು ನಿರ್ಮಾಪಕರು ಮಾಧ್ಯಮಮಿತ್ರರು ಹಾಗು ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು!ಹೇಳಿ ಹೇಗಿದ್ದರಬೇಕು ಅಪಮಾನ ಅವಮಾನ ಹಸಿವಿನಿಂದ ನಿದ್ರೆಗೆಟ್ಟು ಗೆದ್ದ ಒಬ್ಬ ಸಾಮಾನ್ಯನ ಬದುಕು!ಆಗ ನಮ್ಮ ಬಗ್ಗೆ ಹೇಳಲು ಇದ್ದದ್ದು ಒಂದೆ ಬರಹಮಾಧ್ಯಮ ಮಾತ್ರ! ನೆನಪಿಡಿ ಇಂದು ನೂರಾರು ಮಾಧ್ಯಮ, ಅಂಗೈಯಲ್ಲೆ ಆಕಾಶ ತೋರಿ ಹತ್ತಾರುವರ್ಷ ಸಾಧನೆ ಕ್ಷಣಮಾತ್ರದಲ್ಲೆ ಅನುಮಾನದಿಂದ ಸಾಧಕನ ನೋಡುವಂತ ಮಾಯಾಜಾಲ ಜಾಲತಾಣ,

ಸಿಕ್ಕಸಿಕ್ಕವರ ಕೈಲಿ ಈ ಜಾಲಸಿಕ್ಕು ವಯಸ್ಸು ಸಾಧನೆ ಅವರ ಮೂಗಿನ ನೇರಕ್ಕೆ ಅವರು ಬದುಕಿದ ಪರಿಸರ ಭಾಷೆಬಳಸಿ ಅವಮಾನ ಮಾಡಿ ವಿಕೃತ ಆನಂದ ಅನುಭವಿಸುವುದು ವಿಪರ್ಯಾಸ ದಿನಗಳು!ಇಂದಿನ ಸಾರ್ವಜನಿಕ ಜೀವನ public toilet ನಂತೆ ಆಗಿಬಿಟ್ಟಿದೆ!ಆದರು ವಿಧಿಯಿಲ್ಲಾ ಚರ್ಮ ದಪ್ಪಮಾಡಿ ಬದುಕಬೇಕು!

ಈಗ ವಿಷಯಕ್ಕೆ ಬರುವೆ ಈ ಅಕ್ಷರ ಠಂಕಿಸಿದ್ದಕ್ಕೆ

ಉಧ್ಯಮದ ಕಲಾಬಂಧುಗಳಿಗೆ ನನ್ನ ಸಣ್ಣ ಅನುಭವದ ನುಡಿ!

ಮಾನ್ಯರೆ ನಶ್ವರ ಬಣ್ಣದ ಬದುಕು!ಕಲಾವಿಧನ ಜೀವನ ನಡೆಯುವವರೆಗೆ ನಾಣ್ಯ ಮಿಕ್ಕಂತೆ ಸವಕಲು! ಎಲ್ಲಿಯವರೆಗು ಕಲಾವಿದ ವರ್ಷಕ್ಕೆ ಮಾತ್ರ ಹೊರಬರುವ ಊರ ಮೆರೆದೇವರಂತೆ ಹೊರ ಬರಬೇಕು,ಆಗ ದೇವರಪರ ಅದ್ಭುತ ಅನನ್ಯ!ದಿನ ಆ ದೇವರು ಬೀದಿಗೆ ಬಂದರೆ ಮೌಲ್ಯ ಇರುವುದಿಲ್ಲಾ!ರಾಜನಾಗಲಿ ಸೇವಕನಾಗಲಿ ಜಗಳ ಗರ್ಷಣೆ ಸಹಜ!ಆ ಗರ್ಷಣೆ ನಿಭಾಯಿಸುವ ಕಲೆ ಕರಗತ ಆಗಿರಬೇಕು ಆಗ ಕಾಡ್ಗಿಚ್ಚನ್ನು ತಣ್ಣಗೆ ಮಾಡಬಹುದು!ಹಾಗೆ ಅನ್ಯತ ಭಾವಿಸದೆ ನನ್ನ ಮಾತು ಆಲಿಸಬೇಕು ಕಲಾಬಂಧುಗಳು!ಆತ್ಮೀಯ ಮಾಧ್ಯಮಮಿತ್ರರು ಕಲಾರಂಗದ ನಮ್ಮಕಾಯಕ ಜನರಿಗೆ ತಲುಪಿಸೋ ನಾವಿಕರು, ನಾವು ನೀವು ದೇಹದ ಎರಡುಕಣ್ಣಂತೆ ಯಾವುದಕ್ಕು ನೋವಾದರು ನಮಗೆ ನಷ್ಟ!ದಯಮಾಡಿ ವಿಶೇಷ ಹೃದಯ ನಿಮ್ಮದಾಗಿ ನಮ್ಮ ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ ವಿನಂತಿ!ಈಗಾಗಲೆ ಚಿತ್ರರಂಗ ಕರೋನ ಹೆಮ್ಮಾರಿ ಹೊಡೆತಕ್ಕೆ ನಲುಗಿದೆ!ಉಧ್ಯಮದ ಹಿರಿಯರು ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಒಡೆದಮನಗಳ ಸರಿಮಾಡಿ ಎಂದು ಪ್ರಾರ್ಥನೆ


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ