Breaking News
Home / ಜಿಲ್ಲೆ / ಯಾದಗಿರಿ / ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ

ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ

Spread the love

ಯಾದಗಿರಿ: ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಬಸವಸಾಗರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಳೆ ವೇಳೆಗೆ ನೀರಿನ ಹೊರ ಹರಿವು ಜಾಸ್ತಿಯಾಗುವ ಸಾಧ್ಯತೆಯಿದೆ.ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಇದಾಗಿದ್ದು, ಈಗಾಗಲೇ ಜಲಾಶಯ ಭರ್ತಿಯಾಗಿದೆ. ಇನ್ನೂ ಮತ್ತೆ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದವಾಗುತ್ತಿದ್ದು, ಕೃಷ್ಣಾ ನದಿ ತೀರಕ್ಕೆ ಜನರು ತೆರಳದಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ.

ಈಗಾಗಲೇ ನದಿ ತೀರದ ತಾಲೂಕಗಳಾದ ಶಹಾಪುರ, ಸುರಪುರ, ವಡಗೇರಾ, ಹುಣಸಗಿಯಲ್ಲಿ ಕಾಳಜಿ ಕೇಂದ್ರ ಗುರುತಿಸುವ ಕಾರ್ಯ ಆರಂಭಗೊಂಡಿದೆ. ಒಂದು ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಯುವ ತನಕ ಜಿಲ್ಲೆಯ ಯಾವುದೇ ಗ್ರಾಮಕ್ಕೆ ಅಪಾಯವಾಗುವುದಿಲ್ಲ. ಆದರೆ ಜಲಾಶಯದ ಹೊರ ಹರಿವು ಒಂದು ಲಕ್ಷ ಕ್ಯೂಸೆಕ್ ದಾಟಿದ್ರೆ, ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಸಂಪೂರ್ಣ ಸಂಪರ್ಕ ಕಳೆದುಕೊಂಡು, ನಡುಗಡ್ಡೆಯಾಗಲಿದೆ. ಇನ್ನೂ ಕೊಳ್ಳೂರು ಸೇತುವೆ ಮುಳುಗಡೆಯಾಗುವ ಸಾಧ್ಯತೆಯಿದೆ. ಛಾಯಾಭಗವತಿ ದೇವಸ್ಥಾನ ಮುಳುಗಡೆ ಸೇರಿದಂತೆ ಯಕ್ಷಚಿಂತಿ, ಗೌಡೂರು, ಯಮನೂರು, ಸೂಗೂರು ಗ್ರಾಮಗಳ ಜಮೀನಿಗಳು ಸಂಪೂರ್ಣ ನೀರಿನಲ್ಲಿ ಜಲಾವೃತಗೊಳ್ಳಲಿವೆ. ನೀರಿನ ಪ್ರಮಾಣ ಹೆಚ್ಚಾದಂತೆ ಗ್ರಾಮಗಳಿಗೂ ನೀರು ನುಗ್ಗುವ ಸಾಧ್ಯತೆ ಇದೆಬಸವಸಾಗರ ಜಲಾಶಯ ಒಟ್ಟು 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸದ್ಯ ಡ್ಯಾಂ ನಲ್ಲಿ 30.06 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಸದ್ಯ 50 ಸಾವಿರ ಕ್ಯೂಸೆಕ್ ಒಳಹರಿವು ಇದ್ದರೆ, ಒಟ್ಟು 24 ಗೇಟ್ ಗಳ ಪೈಕಿ ಏಳು ಗೇಟ್ ಗಳ ಮೂಲಕ 50 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಹಂತ ಹಂತವಾಗಿ ಹೊರ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ.

 

 


Spread the love

About Laxminews 24x7

Check Also

ಶೀಲ ಶೆಂಕಿಸಿ ಪತಿಯೇ ತನ್ನ ಪತ್ನಿಯನ್ನು ಸಲಾಕೆಯಿಂದ ಹೊಡೆದು ಕೊಲೆ

Spread the loveಯಾದಗಿರಿ: ಶೀಲ ಶೆಂಕಿಸಿ ಪತಿಯೇ ತನ್ನ ಪತ್ನಿಯನ್ನು ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ