Breaking News

56 ಇಂಚಿನ ಎದೆ ಇದ್ದರೆ ಸಾಲದು, ಆ ಎದೆಯಲ್ಲಿ ಬಡವರ ಕಷ್ಟಕ್ಕೆ ನೆರವಾಗುವ ಮಾತೃ ಹೃದಯ ಇರಬೇಕು : ಸಿದ್ದರಾಮಯ್ಯ

Spread the love

ಚಿಕ್ಕಬಳ್ಳಾಪುರ: ಕೊರೊನಾ ಸಂದರ್ಭದಲ್ಲಿ ಬಡ ಜನರಿಗೆ ನೆರವಾಗಲು ಮೋದಿಗಿರುವಂತೆ 56 ಇಂಚಿನ ಎದೆ ಇದ್ದರೆ ಸಾಲದು, ಆ ಎದೆಯಲ್ಲಿ ಬಡವರ ಕಷ್ಟಕ್ಕೆ ನೆರವಾಗುವ ಮಾತೃ ಹೃದಯ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಗುಡುಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ, ಕೋವಿಡ್ ಎರಡನೇ ಅಲೆಯಲ್ಲಿ ಕ್ಷೇತ್ರದ ಶಾಸಕ ವೆಂಕಟರಮಣಯ್ಯ ಆಯೋಜಿಸಿದ್ದ ಕೊರೊನಾ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ದಿನಸಿಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಾಸಕ ವೆಂಕಟರಮಣಯ್ಯ ಜನಪರ ಕಾಳಜಿ ಉಳ್ಳ ವ್ಯಕ್ತಿಯಾಗಿದ್ದಾರೆ. ಶಾಸಕರಾಗಿ ದೊಡ್ಡಬಳ್ಳಾಪುರಕ್ಕೆ ದೊರೆತಿರುವುದು ತಾಲೂಕಿನ ಜನರ ಅದೃಷ್ಟವಾಗಿದೆ. ಕಷ್ಟ ಕಾಲದಲ್ಲಿ ಎಲ್ಲರಿಗೂ ನೆರವು ನೀಡುವ ಮನಸ್ಸು ಇರುವುದಿಲ್ಲ. ಆದರೆ ವೆಂಕಟರಮಣಯ್ಯ ತಾಲೂಕಿನ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದು, ನಿರಂತರವಾಗಿ ಮೂವತ್ತು ದಿನಗಳ ಕಾಲ ಅನ್ನ ದಾಸೋಹ ನಡೆಸಿ ಹಸಿದವರಿಗೆ ಅನ್ನ ನೀಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದಿದ್ದಾರೆ.

ಕೊರೊನಾ ಇಡೀ ವಿಶ್ವವನ್ನೆ ಕಾಡಿದ ಮಾರಿಯಾಗಿದೆ, ಜನರ ಕಷ್ಟದಲ್ಲಿ ನೆರವಾಗುವಂತೆ ರಾಜ್ಯ ಕಾಂಗ್ರೆಸ್ ಪಕ್ಷದ ಹಾಲಿ ಮಾಜಿ ಶಾಸಕರು, ಸಂಸದರಿಗೆ ಸೂಚನೆ ನೀಡಿದ್ದು, ಅವರು ಸಹ ಬಡವರಿಗೆ ನೆರವು ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ವೆಂಕಟರಮಣಯ್ಯ ದಿನಸಿ ಕಿಟ್ ವಿತರಿಸುತ್ತಿದ್ದಾರೆ. ಇದು ಇವರು ಮಾಡಬೇಕಾದ ಕೆಲಸವಲ್ಲ, ಲಾಕ್‍ಡೌನ್ ಮಾಡಿದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಸಲಹೆ ನೀಡಿದೆ ಚಾಲಕರು, ಕಾರ್ಮಿಕರು, ರೈತರೂ ಸೇರಿದಂತೆ ಎಲ್ಲರಿಗೂ 10 ಸಾವಿರ ಹಣ, 10ಕೆಜಿ ಅಕ್ಕಿ ನೀಡುವಂತೆ ಸಲಹೆ ನೀಡಿದೆ ಆದರೆ ಕೇಳಲಿಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಜನರ ಕಷ್ಟ ಅರಿವಾಗುತ್ತಿಲ್ಲ. ಪೆಟ್ರೋಲ್ ಡೀಸೆಲ್, ಗ್ಯಾಸ್, ಅಡುಗೆ ಎಣ್ಣೆ ಬೆಲೆ ಏರಿಕೆ ಯಾರ ಕಾಲದಲ್ಲಿ ಇಷ್ಟು ಆಗಿರಲ್ಲಿಲ್ಲ. ಮೋದಿ ಸರ್ಕಾರ ಕಾರಣ, ಬರೀ ಸುಳ್ಳು ಹೇಳುತ್ತಾ ಜನರ ಜೀವನ ಹಾಳು ಮಾಡಿದ್ದಾರೆ. ಕೋವಿಡ್ ಲಸಿಕೆ ಸುಳ್ಳು ಹೇಳುತ್ತಿದ್ದಾರೆ. ಕೊರೊನಾಗೆ ಮದ್ದು ವ್ಯಾಕ್ಸಿನ್ ಆಗಿದ್ದು ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ