Breaking News
Home / ಜಿಲ್ಲೆ / ಬೆಂಗಳೂರು / ಸಿಎಂ ಬದಲಾವಣೆ ನಿಶ್ಚಿತ, ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಕೂಡ ಹೊರಕ್ಕೆ – ನಳೀನ್‌ ಕುಮಾರ್‌ ಕಟೀಲ್‌ ಆಡಿಯೋ

ಸಿಎಂ ಬದಲಾವಣೆ ನಿಶ್ಚಿತ, ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಕೂಡ ಹೊರಕ್ಕೆ – ನಳೀನ್‌ ಕುಮಾರ್‌ ಕಟೀಲ್‌ ಆಡಿಯೋ

Spread the love

ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ,ಈಶ್ವರಪ್ಪ  ಅವರನ್ನು ಕೂಡ ಹೊರಗಿಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದು ಬಹಿರಂಗವಾಗಿದೆ.
ತಮ್ಮ ಅಪ್ತರ ಬಳಿ ತುಳು ಭಾಷೆಯಲ್ಲಿ ಮಾತುಕತೆ ನಡೆಸಿರುವ ನಳೀನ್‌ ಕುಮಾರ್‌ ಕಟೀಲ್‌ ಅವರು, ಈ ಸಂಗತಿಯನ್ನು ಬಹಿರಂಗಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆಯಲ್ಲದೆ ಸಧ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂಬುದನ್ನು ಖಚಿತಪಡಿಸಿದಂತಾಗಿದೆ.
ಈ ಸಂಬಂಧದ ಆಡಿಯೋ ಬಹಿರಂಗವಾಗಿದ್ದು,ಯಡಿಯೂರಪ್ಪ ಅವರ ಜಾಗಕ್ಕೆ ಮೂವರ ಪೈಕಿ ಒಬ್ಬರು ಬರಲಿದ್ದಾರೆ ಎಂದು ನಳೀನ್‌ ಕುಮಾರ್‌ ಕಟೀಲ್‌ ಸುಳಿವು ನೀಡಿದ್ದಾರೆ. ಆದರೆ ಆ ಮೂವರು ಯಾರು ಎನ್ನುವುದನ್ನು ಹೇಳಿಲ್ಲ. ಯಾರೇ ಆದರೂ ನಮ್ಮವರೇ ಆಗಲಿದ್ದಾರೆ ಎಂದೂ ಹೇಳಿದ್ದಾರೆ.

ತಮ್ಮ ಆಪ್ತರ ಬಳಿ ಕಟೀಲ್‌ ಅವರು ತುಳುವಿನಲ್ಲಿ ಮಾತನಾಡಿದ್ದು:ಯಾರಿಗೂ ಹೇಳಬೇಡ, ಶೆಟ್ಟರ್‌, ಈಶ್ವರಪ್ಪ ಮತ್ತವರ ಟೀಮು ಹೊರಬೀಳಲಿದ್ದು ಆನಂತರ ನಾವು ಹೇಳಿದಂತೆಯೇ ನಡೆಯಲಿದೆ.
ಯಾರೇ ಬಂದರೂ ನಮಗೆ ಬೇಕಾದವರೇ ಆಗಿರಲಿದ್ದು ಮೂರು ಜನರ ಹೆಸರು ಹೈಕಮಾಂಡ್‌ ಗಮನದಲ್ಲಿದೆ ಎಂದಿರುವ ನಳೀನ್‌ ಕುಮಾರ್‌ ಕಟೀಲ್‌ ಅವರು, ಆ ಮೂಲಕ ನಾಯಕತ್ವ ಬದಲಾವಣೆಯಿಲ್ಲ ಎಂಬ ಯಡಿಯೂರಪ್ಪ ಅವರ ಆತ್ಮವಿಶ್ವಾಸಕ್ಕೆ ಬಿಗ್‌ ಷಾಕ್‌ ನೀಡಿದ್ದಾರೆ.
ಅದೇ ಕಾಲಕ್ಕೆ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿರುವ ಮಾಜಿ ಮುಖ್ಯಮಂತ್ರಿ,ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌,ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅಂಡ್‌ ಟೀಮು ಹೊರಬೀಳಲಿದೆ ಎಂಬ ಅಂಶವನ್ನೂ ಕಟೀಲ್‌ ಬಹಿರಂಗಪಡಿಸಿರುವುದು ಕುತೂಹಲಕಾರಿಯಾಗಿದೆ.
ಇದು ನಳಿನ್ ಕುಮಾರ ಕಟೀಲು ಅವರ ಧ್ವನಿಯೇ ಹೌದೇ ಎನ್ನುವುದು ಖಚಿತವಾಗಬೇಕಿದೆ

ಆದರೆ, ಈ ಆಡಿಯೋ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ. ನಮ್ಮಲ್ಲಿ, ನನ್ನ ಹಂತದಲ್ಲಿ ಸಿಎಂ ಬದಲಾವಣೆ ಚರ್ಚೆಯೇ ಇಲ್ಲ ಎಂದು ನಳಿನ್ ಕುಮಾರ ಕಟೀಲು ತಿಳಿಸಿದ್ದಾರೆ. 


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ