Breaking News
Home / ರಾಜಕೀಯ / ಸಂಸತ್ ಮುಂಗಾರು ಅಧಿವೇಶನ; ಚರ್ಚೆಗೆ ಸರ್ವಪಕ್ಷಗಳು ಅಣಿ

ಸಂಸತ್ ಮುಂಗಾರು ಅಧಿವೇಶನ; ಚರ್ಚೆಗೆ ಸರ್ವಪಕ್ಷಗಳು ಅಣಿ

Spread the love

ನವದೆಹಲಿ, ಜುಲೈ 19: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸದ್ಯಕ್ಕೆ ದೇಶದಲ್ಲಿನ ಸಮಸ್ಯೆಗಳಾದ ಇಂಧನ ಬೆಲೆ ಏರಿಕೆ, ಕೊರೊನಾ ನಿರ್ವಹಣೆ, ರೈತರ ಪ್ರತಿಭಟನೆ, ಲಸಿಕೆಯ ಕೊರತೆಯಂಥ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆಯಿದೆ.

ಜುಲೈ 19ರಿಂದ 17ನೇ ಲೋಕಸಭೆಯ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಆಗಸ್ಟ್‌ 13ರಂದು ಮುಕ್ತಾಯವಾಗಲಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆದ ನಂತರ ನಡೆಸಲಾಗುತ್ತಿರುವ ಮೊದಲ ಮುಂಗಾರು ಅಧಿವೇಶನ ಇದಾಗಿದೆ.

ಕಳೆದ ವರ್ಷ ಕೊರೊನಾ ಕಾರಣವಾಗಿ ಸೆಪ್ಟೆಂಬರ್‌ನಲ್ಲಿ ಮುಂಗಾರು ಅಧಿವೇಶನ ಹಮ್ಮಿಕೊಳ್ಳಲಾಗಿತ್ತು.

ಮುಂಗಾರು ಅಧಿವೇಶನದ 19 ಕಲಾಪಗಳಲ್ಲಿ ದೇಶದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು. ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಮಧ್ಯಾಹ್ನ 1ರಿಂದ ಸಂಜೆ 6ರವರೆಗೆ ಕಲಾಪಗಳು ನಡೆಯಲಿವೆ.

ಅಧಿವೇಶನಕ್ಕೂ ಮುನ್ನ ಭಾನುವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ 33 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗವಹಿಸಿ ಕಲಾಪದಲ್ಲಿ ಯಾವ ವಿಷಯಗಳ ಕುರಿತು ಬಗ್ಗೆ ಚರ್ಚಿಸಬೇಕು ಎಂಬುದರ ಸಲಹೆ ನೀಡಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳು ಸೇರಿದಂತೆ ಎಲ್ಲ ಸದಸ್ಯರ ಸಲಹೆಗಳು ಮೌಲ್ಯಯುತವಾಗಿವೆ. ಸರ್ವ ಸದಸ್ಯರ ಅಭಿಪ್ರಾಯದಂತೆ ಕಲಾಪ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ.

ಜನರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪಕ್ಷಗಳು ಸೌಹಾರ್ದಯುತವಾಗಿ ಮಾತನಾಡಬೇಕು ಹಾಗೂ ಅದಕ್ಕೆ ಪ್ರತಿಕ್ರಿಯೆ ನಡೆಯಲು ಸರ್ಕಾರಕ್ಕೆ ಅವಕಾಶ ನೀಡಬೇಕು. ಅಂಥ ವಾತಾವರಣ ಸೃಷ್ಟಿಸುವುದು ಎಲ್ಲರ ಜವಾಬ್ದಾರಿ ಎಂದಿದ್ದಾರೆ.

ಸಭೆ ನಂತರ ಮಾತನಾಡಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, “ಲೋಕಸಭೆ ಮಳೆಗಾಲದ ಅಧಿವೇಶನದಲ್ಲಿ 20ಕ್ಕೂ ಹೆಚ್ಚು ವಿಧೇಯಕಗಳು ಮಂಡನೆ ಆಗಲಿದ್ದು, ಪ್ರತಿಪಕ್ಷಗಳು ತರುವ ಯಾವುದೇ ಬಗೆಯ ಚರ್ಚೆಗೆ ಸರ್ಕಾರ ಸಿದ್ಧವಿದೆ. ವಿಶ್ವದಲ್ಲೇ ಅತೀ ದೊಡ್ಡ ಕೊರೊನಾ ಲಸಿಕೆ ಅಭಿಯಾನ ನಡೆಸಿದ್ದೇವೆ. ಈಗಾಗಲೇ 40 ಕೋಟಿಯಷ್ಟು ಲಸಕೆ ನೀಡಿದ್ದೇವೆ. ಎಲ್ಲರಿಗೂ ಲಸಿಕೆ ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕೊರೊನಾ ನಿಯಂತ್ರಿಸಲು ಯಶಸ್ವಿಯಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ