ಮುಂಬೈ: ಸುಶಾಂತ್ ಆತ್ಮಹತ್ಯೆ ಬೆನ್ನಲ್ಲೇ ಮುಂಬೈನ ಖ್ಯಾತ ಕಿರುತೆರೆ ನಟ ಸಮೀರ್ ಶರ್ಮಾ (44) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮುಂಬೈನಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇವರ ಅಸಹಜ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಅಂತಾ ತಿಳಿದು ಬಂದಿದ್ದು, ಸ್ಥಳೀಯರಿಗೆ ವಾಸನೆ ಬಂದು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮೀರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಅನುಮಾನವನ್ನ ವ್ಯಕ್ತಪಡಿಸಿದ್ದಾರೆ.