ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ.
ಜಯರಾಂ (28), ಸುಶೀಲಾ (26), ಆಕಾಶ್ (4) ಮೃತರು. ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರು ರಾಜಸ್ಥಾನ ಮೂಲದವರಾಗಿದ್ದು ರಾಜಸ್ಥಾನ ದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.