ಬೆಂಗಳೂರು: ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿ ಮೇಘಾ ಶೆಟ್ಟಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಮೇಘಾ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ
ನಾನು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜವಾಗಿರುತ್ತದೆ. ಈಗ ಗೊಂದಲ ಬಗೆಹರಿದಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ. ಈ ಗೊಂದಲದಿಂದ ವೀಕ್ಷಕರಲ್ಲಿ ಆತಂಕ ಉಂಟಾಗಿತ್ತು. ಈ ಬಗ್ಗೆ ಎಲ್ಲ ವೀಕ್ಷಕರಲ್ಲೂ ಕ್ಷಮೆ ಕೇಳುತ್ತಿದ್ದೇನೆ. ಇನ್ನು ಮುಂದೆ ಈ ರೀತಿ ಆಗಲ್ಲ ಎಂದು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.
ಮುಂದೆ ಈ ರೀತಿ ಸುದ್ದಿ ಕೇಳಿ ಬಂದರೆ ಅದಕ್ಕೆ ಗಮನಕೊಡಬೇಡಿ. ಮುಂದೆಯೂ ಇದೇ ರೀತಿ ಬೆಂಬಲಕೊಡಿ. ಜೊತೆ ಜೊತೆಯಲಿ ಧಾರಾವಾಹಿಯಿಂದ ನಾನು ಸಾಕಷ್ಟು ಪಡೆದುಕೊಂಡಿದ್ದೇನೆ. ಅದಕ್ಕೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ವಿಶ್ವಾಸ ಹೀಗೆ ಇರಲಿ ಎಂದು ಅಭಿಮಾನಿಗಳಲ್ಲಿ ಕೋರಿದ್ದಾರೆ ಅವರು.
Laxmi News 24×7