Breaking News

ಗೊಂದಲದಲ್ಲಿರುವ ಬಿಜೆಪಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ: ಎನ್.ಎಸ್.ಬೋಸರಾಜು

Spread the love

ರಾಯಚೂರು: ಬಿಜೆಪಿ ಪಕ್ಷದಲ್ಲಿ ಕಳೆದ ಒಂದು ವರ್ಷದಿಂದ ಬಹಳ ಗೊಂದಲಗಳಿವೆ. ಪಕ್ಷದ ಗೊಂದಲಗಳಿಂದ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿಲ್ಲ. ಗೊಂದಲದಲ್ಲಿರುವ ಪಕ್ಷದ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಅಂತ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಆಡಳಿತ ಚುಕ್ಕಾಣಿ ಹಿಡಿದ ಪಕ್ಷ ಸ್ಥಿರ ಸರ್ಕಾರ ಕೊಡಬೇಕು. ಬಿಜೆಪಿ ರಾಜ್ಯಾಧ್ಯಕ್ಷರ ಮಾತುಗಳನ್ನ ನೋಡಿದರೆ ಪಕ್ಷದಲ್ಲಿ ಸರಿಯಿಲ್ಲ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಪಕ್ಷದ ಗೊಂದಲಗಳನ್ನು ಬಗೆಹರಿಸಿಕೊಂಡು ಉತ್ತಮ ಸರ್ಕಾರ ನಡೆಸಬೇಕು ಎಂದಿದ್ದಾರೆ.

ಕೋವಿಡ್ ವಿಚಾರದಲ್ಲಿ ಬರೀ ಸುಳ್ಳು ಅಂಕಿ-ಅಂಶಗಳನ್ನು ಸರ್ಕಾರ ಹೇಳಿಕೊಂಡು ಬಂದಿದೆ. ಅವರು ಕೊಟ್ಟ ಸಂಖ್ಯೆಗಿಂತ ನಾಲ್ಕುಪಟ್ಟು ಜನ ಸತ್ತಿದ್ದಾರೆ. ಲಕ್ಷಾಂತರ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸುವಂತೆ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಸ್ಥಿರ ಸರ್ಕಾರ ನಡೆಸಬೇಕು ಅಂತ ಮಾಜಿ ಎಂಎಲ್‍ಸಿ ಎನ್.ಎಸ್.ಬೋಸರಾಜು ಹೇಳಿದ್ದಾರೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ