ಶಿವಮೊಗ್ಗ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಅನೇಕ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಇದೀಗ ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ ಯಾಗಿದ್ದು, ಜಲಾಶಯದಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, 22 ಗೇಟ್‍ಗಳ ಮೂಲಕ 71 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯಕ್ಕೆ ಯಥೇಚ್ಛ ನೀರು ಹರಿದು ಬಂದಿದೆ. ಇದರಿಂದ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನೀರಿನ ಮಟ್ಟ 588.24 ಮೀಟರ್‌ಗಿಂತಲೂ ಹೆಚ್ಚು ತಲುಪಿದೆ. ಗಾಜನೂರು ಡ್ಯಾಂ 588.24 ಮೀಟರ್ ಎತ್ತರ ಇದೆ. ಶೃಂಗೇರಿ, ತೀರ್ಥಹಳ್ಳಿ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಡ್ಯಾಂಗೆ 70 ಸಾವಿರ ಕ್ಯೂಸೆಕ್ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.