ಬೆಂಗಳೂರು : ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿದ್ದಂತ ನಟಿ ಶೃತಿಯನ್ನು, ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆ ನೀಡಲಾಗಿತ್ತು. ಇದೀಗ ಇಂದು ನಟಿ ಶೃತಿಗೆ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ ಅಧಿಸೂಚನೆ ಹೊರಡಿಸಿದ್ದು, ಮುಖಅಯಮಂತ್ರಿಯವರ ಗೃಹ ಕಚೇರಿಯ ಟಿಪ್ಪಣಿಯಂತೆ ಶ್ರೀಮತಿ ಶೃತಿಯವರನ್ನು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇದರ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ.
ಅಂದಹಾಗೇ ಈ ಹಿಂದೆ ನಟಿ ಶೃತಿ ಅವರನ್ನು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿ ನೇಮಸಿಲಾಗಿತ್ತು. ಆದ್ರೇ ನಿನ್ನೆಯಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆಯನ್ನು ಆ ಹುದ್ದೆಗೆ ಏರಿಸಿ ಆದೇಶಿಸಲಾಗಿತ್ತು. ಇದರ ಬೆನ್ನಲ್ಲಿ ನಟಿ ಶೃತಿಗೆ ಇದೀಗ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷೆಯನ್ನಾಗಿ ನೇಮಿಸಿ ಆದೇಶಿಸಿದೆ.