Breaking News

BSY ಜತೆ ಸಮುದಾಯ : ಬದಲಾವಣೆ ಕೆಂಡಕ್ಕೆ “ಆಡಿಯೋ’ ತುಪ್ಪ : ಬಿಎಸ್‌ವೈ ಮೌನ

Spread the love

ಬೆಂಗಳೂರು : ಒಂದು ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಬಿಜೆಪಿ ಮೇಲೆ ಅಡ್ಡ ಪರಿಣಾಮ ಉಂಟಾದೀತು!

ಇದು ಲಿಂಗಾಯತ ನಾಯಕರು ಮತ್ತು ಮಠಾಧೀಶರು ನೀಡಿರುವ ನೇರ ಎಚ್ಚರಿಕೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಅವರದು ಎನ್ನಲಾದ ಆಡಿಯೋ ಬಹಿರಂಗವಾದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಇನ್ನಷ್ಟು ಬಿಸಿ ಪಡೆದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಯಡಿಯೂರಪ್ಪ, ವಲಸಿಗ ಸಚಿವರು ಮತ್ತು ಸಿಎಂ ಬೆಂಬಲಿಗರು ಮೌನಕ್ಕೆ ಶರಣಾಗಿದ್ದಾರೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹಿರಿಯ ಸಚಿವರಾದ ಕೆ.ಎಸ್‌. ಈಶ್ವರಪ್ಪ, ಸುರೇಶ್‌ ಕುಮಾರ್‌, ವಿ. ಸೋಮಣ್ಣ ಅವರು ಆಡಿಯೋದಲ್ಲಿರುವುದು ನಳಿನ್‌ ದನಿಯಲ್ಲ ಎಂದಿದ್ದಾರೆ. ಸಚಿವರಾದ ಬಸವರಾಜ ಬೊಮ್ಮಾಯಿ, ಆರ್‌. ಅಶೋಕ್‌, ಡಾ| ಸುಧಾಕರ್‌, ಬೈರತಿ ಬಸವರಾಜ್‌, ಎಸ್‌.ಟಿ. ಸೋಮಶೇಖರ್‌, ಬಿ.ಸಿ. ಪಾಟೀಲ್‌ ಮತ್ತಿತರರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಘಟನಾವಳಿಯ ಬಗ್ಗೆ ಚರ್ಚಿಸಿದ್ದಾರೆ.
ಘಟನೆಯ ಬಗ್ಗೆ ಯಡಿಯೂರಪ್ಪ ಆಪ್ತ ಸಚಿವರ ಎದುರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಶೆಟ್ಟರ್‌ ದಿಲ್ಲಿಗೆ
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ವಾರಾಣಸಿಗೆ ಭೇಟಿ ನೀಡಿದ್ದಾರೆ. ಈ ನಡುವೆ ಸಚಿವ ಜಗದೀಶ್‌ ಶೆಟ್ಟರ್‌ ಇಲಾಖೆ ಕೆಲಸದ ಮೇಲೆ ಗುಜರಾತ್‌ಗೆ ತೆರಳಿ ಅಲ್ಲಿಂದ ದಿಲ್ಲಿಗೆ ಹೋಗಿದ್ದಾರೆ. ರಾಜ್ಯಪಾಲ  ಥಾವರ್‌ಚಂದ್‌ ಗೆಹೊàಟ್‌ ಅವರೂ ದಿಲ್ಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ.

ಸಮಯ ಕೇಳಿದ ಮುಖ್ಯಮಂತ್ರಿ?
ಯಡಿಯೂರಪ್ಪ ಜು. 26ರಂದು ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ ಎನ್ನಲಾಗಿದ್ದು, ಇದು ವಿರೋಧಿ ಬಣದಲ್ಲಿ ಕುತೂಹಲ ಮೂಡಿಸಿದೆ. ಜತೆಗೆ ಅಂದೇ ವಿಧಾನಸಭೆ ಸಚಿವಾಲಯದ ಸಿಬಂದಿಗೆ ಭೋಜನ ಕೂಟ ಏರ್ಪಡಿಸಿದ್ದು, ಗ್ರೂಪ್‌ ಫೋಟೊ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಲಿಂಗಾಯತರ ಬೆಂಬಲ
ವೀರಶೈವ-ಲಿಂಗಾಯತ ಮುಖಂಡರು, ಕಾಂಗ್ರೆಸ್‌ ನಾಯಕರಾದ ಎಂ.ಬಿ. ಪಾಟೀಲ್‌ ಮತ್ತು ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಬಾಳೆಹೊನ್ನೂರು ಪೀಠದ ರಂಭಾಪುರಿ ಸ್ವಾಮೀಜಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಬೆನ್ನಿಗೆ ನಿಲ್ಲುವ ಮೂಲಕ ಬಿಜೆಪಿ ವರಿಷ್ಠರಿಗೆ ಸಂದೇಶ ರವಾನೆ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಲಿಂಗಾ ಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಅವರ ವಯಸ್ಸು ಮತ್ತು ಕೊಡುಗೆ ಪರಿಗಣಿಸಿ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ಎಂ.ಬಿ. ಪಾಟೀಲ್‌ ಟ್ವೀಟ್‌ ಮಾಡಿದ್ದಾರೆ.

ಸೋಮವಾರ ಸಂಜೆ ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ದರು. ಬಳಿಕ ಮಾಧ್ಯಮದ ಜತೆ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯವು ಯಡಿ ಯೂರಪ್ಪ ಪರವಾಗಿದ್ದು, ಅವರನ್ನೇ ಮುಖ್ಯ ಮಂತ್ರಿಯಾಗಿ ಮುಂದುವರಿಸಬೇಕು ಎಂದರು. ನಿಜಲಿಂಗಪ್ಪ, ಜೆ.ಎಚ್‌. ಪಟೇಲ್‌, ವೀರೇಂದ್ರ ಪಾಟೀಲ್‌, ಎ


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ