Breaking News

ಪೊಲೀಸ್‌ ಮಕ್ಕಳ ಅಧ್ಯನಕ್ಕೆ ಗ್ರಂಥಾಲಯ

Spread the love

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಮೈದಾನದ ಕಟ್ಟಡದಲ್ಲಿ ಪೊಲೀಸ್‌ ಸಿಬ್ಬಂದಿ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ನೂತನ ಗ್ರಂಥಾಲಯ ತೆರೆಯಲಾಗಿದೆ.

ಕನ್ನಡ, ಇಂಗ್ಲೀಷ ಭಾಷೆಯಲ್ಲಿರುವ 750 ಪುಸ್ತಕಗಳು ಲಭ್ಯವಿದ್ದು, ಜಿಲ್ಲಾ ಕೇಂದ್ರ ಗ್ರಂಥಾಲಯದ ಸಹಯೋಗದಲ್ಲಿ ಆರಂಭಿಸಲಾಗಿದೆ. ಐಎಎಸ್‌, ಕೆಪಿಎಸ್‌, ಪಿಡಿಒ ಸೇರಿದಂತೆ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳು ಇಲ್ಲಿವೆ. ಏಕಕಾಲದಲ್ಲಿ 25 ಮಂದಿ ಕೂತು ಅಧ್ಯಯನ ನಡೆಸಲು ಅನುಕೂಲವಾಗುವಂತೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಪೊಲೀಸ್‌ ಕಮಿಷನರ್‌ ಲಾಬೂ ರಾಮ್‌ ಗ್ರಂಥಾಲಯಕ್ಕೆ ಚಾಲನೆ ನೀಡಿದ್ದಾರೆ.

‘ಸಿಬ್ಬಂದಿ ಮಕ್ಕಳ ಭವಿಷ್ಯಕ್ಕೆ ಪೂರಕವಾಗಲು ಪೊಲೀಸ್‌ ಕಮಿಷನರೇಟ್‌ ಮತ್ತು ಜಿಲ್ಲಾ ಗ್ರಂಥಾಲಯದ ಜಂಟಿ ಸಹಭಾಗಿತ್ವದಲ್ಲಿ ಗ್ರಂಥಾಲಯ ಸ್ಥಾಪಿಸಲಾಗಿದೆ. ಗ್ರಂಥಾಲಯದಲ್ಲಿ ಓದುವ ವಾತಾವರಣ ನಿರ್ಮಾಣವಾದರೆ, ಮಕ್ಕಳು ಆಕರ್ಷಿತರಾಗುತ್ತಾರೆ. ಓದುವ ಅಭಿರುಚಿ ಇರುವ ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಅರಿವಿರುವ ಸಿಬ್ಬಂದಿಯೊಬ್ಬರನ್ನು ಗ್ರಂಥಾಲಯದ ಮೇಲ್ವಿಚಾರಣೆಗೆ ನಿಯೋಜಿಸಲಾಗಿದೆ. ಇದು ಆರಂಭಿಕ ಹಂತವಾಗಿದ್ದು ಮಕ್ಕಳ ಸ್ಪಂದನೆ ನೋಡಿ ಪುಸ್ತಕ ಮನೆಗೆ ಕೊಂಡೊಯ್ಯಲು ಹಾಗೂ ಗುರುತಿನ ಚೀಟಿ ನೀಡುವ ಕುರಿತು ಚರ್ಚಿಸಲಾಗುವುದು’ ಎಂದು ಸಿಎಆರ್‌ ಡಿಸಿಪಿ ಶ್ರೀನಿವಾಸ ಯಾದವ್‌ ಹೇಳಿದರು.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ