Breaking News

ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಆದೇಶ: B.S.Y.

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಅವರು ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ತಕ್ಷಣ ಹಿಂದಿನ ಬಾಕಿಯೂ ಸೇರಿ ಶೇ.11 ತುಟ್ಟಿ ಭತ್ಯೆಯನ್ನು ಜುಲೈ 1ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ರಾಜ್ಯ ಸರ್ಕಾರದ ಈ ಆದೇಶದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಹಾಗೂ 3 ಲಕ್ಷ ನಿಗಮ ಮಂಡಳಿ ನೌಕರರಿಗೆ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ