Breaking News

KSRTC ಬಸ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ

Spread the love

ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಢಿಕ್ಕಿ ಸಂಭವಿಸಿದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಸಮೀಪ ಮಂಗಳವಾರದಂದು ನಡೆದಿದೆ.

ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಹಾಸನ ಮೂಲದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಢಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಬಸ್ ಚಾಲಕ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ

Spread the love ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ ಕ್ರಿಸ್ಮಸ್ ಮತ್ತು ವರ್ಷಾಂತ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ