Breaking News

ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ; ಬಿಜೆಪಿ ಅಧ್ಯಕ್ಷ ಕಟೀಲ್, ಹಲವು ಶಾಸಕರು ಪಾರು

Spread the love

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಶಾಸಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ.

ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಇದ್ದ ಕಾರಣ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ರನ್ ವೇ ನಲ್ಲಿ ನೀರು ತುಂಬಿಕೊಂಡಿದ್ದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಆಗದೆ, ಮತ್ತೆ ಹಾರಾಟ ನಡೆಸಿದೆ 25 ನಿಮಿಷದ ಹಾರಾಟದ ನಂತರ ವಿಮಾನ ಲ್ಯಾಂಡಿಂಗ್ ಆಗಿದ್ದು, ಈ ವೇಳೆಯಲ್ಲಿ ಪ್ರಯಾಣಿಕರು ಆತಂಕದಿಂದ ಕಣ್ಣೀರು ಹಾಕಿದ್ದಾರೆನ್ನಲಾಗಿದೆ.

ವಿಮಾನದಲ್ಲಿ ನಳಿನ್ ಕುಮಾರ್ ಕಟೀಲ್, ಉಪ ಸಭಾಪತಿ ಪ್ರಾಣೇಶ್, ಶಾಸಕರಾದ ಬೆಳ್ಳಿ ಪ್ರಕಾಶ್, ಜೀವರಾಜ್ ಸೇರಿದಂತೆ ಹಲವರು ಇದ್ದರೆನ್ನಲಾಗಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಲ್ಯಾಂಡಿಂಗ್ ಆಗಬೇಕಿದ್ದ ಇಂಡಿಗೋ ವಿಮಾನ ಮತ್ತೆ ಟೇಕಾಫ್ ಆಗಿ ಆತಂಕ ಉಂಟಾಗಿತ್ತು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದ ಜನತೆಗೆ ಬಿಗ್‌ ಶಾಕ್‌ – ಹಾಲಿನ ದರ 8 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

Spread the loveಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಹಾಲಿನ  ದರ 8 ರೂ. ಹೆಚ್ಚಳಕ್ಕೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ