ಬೆಳಗಾವಿ: ಶಿಶು ಅಭಿವೃದ್ಧಿ ಇಲಾಖೆಯ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಖಾಲಿ ಇರುವ ನಗರ ಪ್ರದೇಶಗಳಲ್ಲಿ ಅದೇ ವಾರ್ಡಿನ ಇಚ್ಛೆಯುಳ್ಳ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ: anganwadiruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು.
ಜು.14 ರಿಂದ ಅಗಸ್ಟ್ 14 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲ ಭವನ ಕಟ್ಟಡ, ಶ್ರೀನಗರ, ಬೆಳಗಾವಿ ಕಛೇರಿಯನ್ನು ಸಂಪರ್ಕಿಸಿ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Laxmi News 24×7