ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆಯೊಂದು ಹೊತ್ತಿ ಉರಿದಿದ್ದು, ಮಲಗಿದ್ದಲ್ಲೇ ವ್ಯಕ್ತಿಯೊಬ್ಬ ಸಜೀವ ದಹನ ಆಗಿದ್ದಾರೆ.
ಪ್ರಕಾಶ್ (55) ಮೃತ ದುರ್ದೈವಿ. ಇವರ ಪತ್ನಿ ಗಂಭೀರ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕಾಶ್ ಮನೆಯಲ್ಲೇ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಬೆಳಗಿನ ಜಾವ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನಿದ್ರೆ ಮಾಡುತ್ತಿದ್ದ ಪ್ರಕಾಶ್ ಅಲ್ಲೇ ಸುಟ್ಟುಕರಕಲಾಗಿದ್ದಾರೆ. ಕಿರಾಣಿ ಅಂಗಡಿಯಲ್ಲಿದ್ದ ಸಾಮಗ್ರಿ ಸಂಪೂರ್ಣ ಸುಟ್ಟು ಬೂದಿಯಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7