Home / ಜಿಲ್ಲೆ / ಬೆಂಗಳೂರು / ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಸಚಿವೆ ಶಶಿಕಲಾ ಜೊಲ್ಲೆ

ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಸಚಿವೆ ಶಶಿಕಲಾ ಜೊಲ್ಲೆ

Spread the love

ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಚಿತ್ರ ಪ್ರಕಟಿಸದಿರುವುದು ನನಗೂ ಬೇಸರ ತರಿಸಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.

ನಿನ್ನೆ ಸೋಮವಾರ ರಾಷ್ಟ್ರೀಯ ಆಂಗ್ಲ ದಿನಪತ್ರಿಕೆಯ ದೆಹಲಿ ಆವೃತ್ತಿಯಲ್ಲಿ ಸಿಎಂ ಯಡಿಯೂರಪ್ಪ ಸಂಪುಟದ ಸಚಿವೆ ಶಶಿಕಲಾ ಜೊಲ್ಲೆ ಅವರು With best wishes from Jolle Group of Companies ಎಂಬ ಜಾಹೀರಾತು ನೀಡಿದ್ದಾರೆ. ಅದರಲ್ಲಿ ಸಹಕಾರ ಖಾತೆ ಸೃಷ್ಟಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ವಂದನೆಗಳನ್ನು ತಿಳಿಸುತ್ತಾ, ಸಹಕಾರ ಸಚಿವ ಸ್ಥಾನ ಪಡೆದ ಅಮಿತ್​ ಶಾ ಅವರನ್ನು ಅಭಿನಂದಿಸಿದ್ದಾರೆ. ಜೊತೆಗೆ ಕರ್ನಾಟಕಕ್ಕೆ 6 ಸಚಿವ ಸ್ಥಾನಗಳನ್ನುನೀಡಿ, ರಾಜ್ಯಕ್ಕೆ ಗರಿಷ್ಠ ಸ್ಥಾನಮಾನ ನೀಡಿದ್ದಕ್ಕೆ ಥ್ಯಾಂಕ್ಸ್​ ಅಂದಿದ್ದಾರೆ. ಇದರ ಜೊತೆಗೆ ಇಡೀ ಪುಟದಲ್ಲಿ ಹಲವು ಬಿಜೆಪಿ ನಾಯಕರ ಫೋಟೋಗಳು ರಾರಾಜಿಸಿವೆ. ಆದರೆ ಈ ಜಾಹೀರಾತಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೊ ಇದ್ದಿರಲಿಲ್ಲ. ಈ ಕಾರಣದಿಂದ ಜಾಹೀರಾತು ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ