Breaking News

‘ಸಿಡಿ ಅಸ್ತ್ರ’ಕ್ಕೆ ಬೆಟ್ಟಿ ಬಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ : ‘ಶಾಸಕ ಎಂಪಿ ರೇಣುಕಾಚಾರ್ಯ’ ವಿರುದ್ಧ ‘CD ಷಡ್ಯಂತ್ರ’.?

Spread the love

ಬೆಂಗಳೂರು : ಸಿಎಂ ಬದಲಾವಣೆ ಬೆನ್ನಲ್ಲೇ, ಈಗ ಸಿಡಿ ಷಡ್ಯಂತ್ರದ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಸಿಡಿ ವಿಚಾರ ಕೂಡ ಈಗ ಮುನ್ನಲೆಗೆ ಬಂದಿದ್ದು, ಇದೇ ಕಾರಣಕ್ಕಾಗಿ ದಿಢೀರ್ ದೆಹಲಿಗೆ ಅವರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಎಂಪಿ ರೇಣುಕಾಚಾರ್ಯ ವಿರುದ್ಧ ಸಿಡಿ ಷಡ್ಯಂತ್ರ ನಡೆಯುತ್ತಿದೆ ಎನ್ನಲಾಗಿದೆ.

 

ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ದೆಹಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸಿಎಂ ಪರವಾಗಿ ಬಿಜೆಪಿ ಹೈಕಮಾಂಡ್ ಗೆ ಮನವರಿಕೆ ಮಾಡಿ ಕೊಡುವ ನಿಟ್ಟಿನಲ್ಲಿ ಎಂಪಿ ರೇಣುಕಾಚಾರ್ಯ ಅವರ ತಂಡವು ದೆಹಲಿಗೆ ತೆರಳಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಸಿಎಂ ಸೂಚನೆಯ ಮೇರೆಗೆ ಅದಕ್ಕೆ ಬ್ರೇಕ್ ಬಿದ್ದಿತ್ತು. ಇದರ ನಡುವೆಯೂ ದೆಹಲಿಗೆ ರೇಣುಕಾಚಾರ್ಯ ತೆರಳಿದ್ದಾರೆ.

ಈ ಬೆಳವಣಿಗೆಯ ಹಿಂದೆ ಅವರ ವಿರುದ್ಧ ಸ್ವ ಪಕ್ಷೀಯರಿಂದಲೇ ಸಿಡಿ ಷಡ್ಯಂತ ನಡೆಯುತ್ತಿದೆ ಎನ್ನುವ ಸುಳಿವನ್ನು ಅರಿತಿರುವಂತ ಅವರು, ದೆಹಲಿಯಲ್ಲಿ ವರಿಷ್ಠರಿಗೆ ದೂರು ನೀಡೋದಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ನಮ್ಮ ಪಕ್ಷದವರೇ ನನ್ನ ವಿರುದ್ಧ ಷಡ್ಯಂತ್ರ ಮಾಡಿರೋ ಬಗ್ಗೆ ವರಿಷ್ಠರಿಗೆ ತಿಳಿಸಲಿದ್ದಾರೆ ಎನ್ನಲಾಗಿದೆ. ಆದ್ರೇ ಶಾಸಕ ರೇಣುಕಾಚಾರ್ಯ ಮಾತ್ರ ಕ್ಷೇತ್ರದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸೋದಕ್ಕಾಗಿ ಬಂದಿದ್ದೇನೆ ಎಂಬುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ