Breaking News

ಲಂಚ ಪಡೆಯುತ್ತಿದ್ದ ಕೆಎಸ್ಸಾರ್ಟಿಸಿ ಟ್ರಾಫಿಕ್ ಕಂಟ್ರೋಲರ್ ಎಸಿಬಿ ಬಲೆಗೆ!

Spread the love

ಮಂಗಳವಾರ ತಡರಾತ್ರಿ ಚಿಂತಾಮಣಿಯಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಎಸ್ ಆರ್ ಟಿಸಿ ಟ್ರಾಫಿಕ್ ಕಂಟ್ರೋಲರ್ ವೆಂಕಟಾಚಲಪತಿಯನ್ನು ಬಲೆಗೆ ಕೆಡವಿದ್ದಾರೆ. ವೆಂಕಟಾಚಲಪತಿ ಸಂಬಂಧಿ ಹಾಗೂ ಮೇಲಾಧಿಕಾರಿಯಾಗಿದ್ದ ಡಿಸಿ ಚಂದ್ರಶೇಖರ್ ವರಿಗೆ ಲಂಚದ ಮೊತ್ತ ತಲುಪಿಸುತ್ತಿದ್ದರು.

ಕೋಲಾರ ಕೆಎಸ್‌ಆರ್ಟಿಸಿ ಡಿಸಿ ಚಂದ್ರಶೇಖರ್ ತಮ್ಮ ಸಂಬಂಧಿಯಾದ ಜಿಎನ್. ವೆಂಕಟಾಚಲಪತಿ ಮೂಲಕ ಕಂಡಕ್ಟರ್ ಬಳಿ 2 ಲಕ್ಷ ರೂ. ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿವೃತ್ತಿ ಘೋಷಣೆ ಮಾಡಲು ಇಷ್ಟು ದೊಡ್ಡ ಮೊತ್ತ ಕೇಳಿದ್ದು ಮುಂಗಡವಾಗಿ 1 ಲಕ್ಷ ರೂ. ಸ್ವೀಕರಿಸಿದ್ದ ಚಂದ್ರಶೇಖರ್ 50 ರೂ. ನೀಡುವಂತೆ ಪಟ್ಟು ಹಿಡಿದಿದ್ದರು.
40 ಸಾವಿರ ರೂ. ಲಂಚ ಪಡೆಯುವ ವೇಳೆ ವೆಂಕಟಾಚಲಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ಎಸಿಬಿ ಡಿವೈಎಸ್ಪಿ ವಿರೇಂದ್ರಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ