Breaking News

ರಾಜ್ಯದಲ್ಲಿ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು, ಎದುರಾದ ಪ್ರವಾಹ ಭೀತಿ; ಮುಂಬೈ-ಬೆಂಗಳೂರು ರಾ.ಹೆ. ಬಂದ್

Spread the love

ಮುಂಬೈ-ಬೆಂಗಳೂರು ರಾ.ಹೆ. ಬಂದ್

ಇನ್ನು, ಚಿಕ್ಕೋಡಿಯಲ್ಲಿ ಮಹಾ ಮಳೆಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಮುಂಬೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚಾರ ಸ್ಥಗಿತಗೊಂಡಿದೆ. ವೇದ ಗಂಗಾ ನದಿಗೆ ಅಪಾರ ಪ್ರಮಾಣದ ನೀರು ಹಿನ್ನಲೆ ಸಂಚಾರ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ವೇದಗಂಗಾ ನದಿ ನೀರು ಹರಿದು ಬರುತ್ತಿದೆ.

ಬೆಳಗಾವಿಯಲ್ಲಿ ಮಳೆ

ಪಶ್ಚಿಮ ಘಟ ಪ್ರದೇಶದಲ್ಲಿ ‌ಭಾರೀ ಮಳೆ ಹಿನ್ನೆಲೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ಒಳಹರಿವು ಬಂದಿದೆ. ಜಲಾಶಯದ ಮಟ್ಟ 2069.00 ಅಡಿಗೆ ಏರಿಕೆಯಾಗಿದೆ. ಯಾವುದೇ ‌ಕ್ಷಣದಲ್ಲಿ ಜಲಾನಯದಿಂದ ನೀರು ಬಿಡುಗಡೆ ಸಾಧ್ಯತೆ ಇದೆ. ಹೀಗಾಗಿ ನದಿಯ ಪಾತ್ರದ ಜನ ಎಚ್ಚರಿಕೆ ವಹಿಸುವಂತೆ‌ ಸೂಚನೆ ನೀಡಲಾಗಿದೆ.

ಸತತ ಮೂರು ದಿನಗಳಿಂದ ಬೆಳಗಾವಿಯಲ್ಲಿ ಮಳೆ ಸುರಿಯುತ್ತಿದೆ. ಬೆಳಗಾವಿ ತಾಲೂಕಿನಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಬಳ್ಳಾರಿ ನಾಲಾ, ಮಾರ್ಕಂಡೇಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

 

ಬೆಂಗಳೂರು): ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿನ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಸಹ ಕಳೆದೊಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಟಿ-ಜಿಟಿ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ನಿನ್ನೆ-ಮೊನ್ನೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ನಿರಂತರ ಮಳೆಯಾಗಿದೆ. ಇಂದು ಸಹ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಹಾ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿವೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ನದಿ ನೀರು ನುಗ್ಗಿದೆ. ಹಿರಣ್ಯಕೇಶಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸಂಕೇಶ್ವರ ಪಟ್ಟಣದ ತಗ್ಗು ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ನೀರು ನುಗ್ಗಿದೆ. ಪಟ್ಟಣದ ಲಕ್ಷ್ಮೀ ದೇವಸ್ಥಾನ ಹಾಗೂ ಶಂಕರಲಿಂಗ ದೇವಸ್ಥಾನಗಳಿಗೂ ನದಿ ನೀರು ನುಗ್ಗಿದೆ. ಕರಾವಳಿಯಲ್ಲಿ ಧಾರಾಕಾರ ಮಳೆ; ಗುಡ್ಡ ಕುಸಿತ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ನಿನ್ನೆ ಯಲ್ಲಾಪುರದ ಅರೆಬೈಲ್ ಬಳಿ ಗುಡ್ಡ ಕುಸಿತವಾಗಿತ್ತು. ಹೀಗಾಗಿ ಅಂಕೋಲಾ-ಹುಬ್ಬಳ್ಳಿ ರಾ. ಹೆದ್ದಾರಿ 63 ಬಂದ್ ಆಗಿತ್ತು. ಹೆದ್ದಾರಿ ಮೇಲೆ ಗುಡ್ಡದ ಮಣ್ಣು ಕುಸಿತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು.

ಶಿರಸಿ, ಸಿದ್ದಾಪುರದಲ್ಲೂ ಭಾರೀ ಮಳೆಯಾಗುತ್ತಿದ್ದು, ಸಣ್ಣ-ಪುಟ್ಟ ನದಿಗಳು ಉಕ್ಕಿ ಹರಿಯುತ್ತಿವೆ. ತಗ್ಗು ಪ್ರದೇಶ ಜಲಾವೃತವಾಗಿದ್ದು, ಜನರು ಕಂಗಾಲಾಗಿದ್ದಾರೆ. ಇನ್ನು, ಕದ್ರಾ ಜಲಾಶಯ ತುಂಬಿದ್ದು, ನಿರಂತರವಾಗಿ ಕಾಳಿ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗೊ ಕಾಳಿ ನದಿ ಪಾತ್ರದ ಗ್ರಾಮಗಳು ಜಲಾವೃತವಾಗುವ ಭಯ ಕಾಡುತ್ತಿದೆ. ಈಗಾಗಲೆ ಸಣ್ಣ ಪುಟ್ಟ ಬಡಾವಣೆಗಳಿಗೆ ನೀರು ನುಗ್ಗಿದೆ.

ಮಲೆನಾಡಲ್ಲೂ ಮಳೆಯ ಆರ್ಭಟಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಲ್ಲತ್ತಿಗಿರಿ ಜಲಪಾತ ಉಕ್ಕಿ ಹರಿಯುತ್ತಿದೆ. ಕೆಮ್ಮಣ್ಣುಗುಂಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಕಲ್ಲತ್ತಿಗಿರಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಕಲ್ಲತ್ತಿಗಿರಿ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನಸೋತಿದ್ದಾರೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ.

ಮಳೆಗೆ ಮನೆ ಕುಸಿತ

ಇನ್ನು, ಸತತ ಮಳೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೇಲ್ಕುಡಿಗೆ ಗ್ರಾಮದಲ್ಲಿ ಮನೆ ಕುಸಿತವಾಗಿದೆ. ರಾಜು ಎಂಬುವರ ಮನೆಯ ಗೋಡೆಗಳು ಕುಸಿದು ಬಿದ್ದಿವೆ. ಜನರು ಮನೆಯಿಂದ ಹೊರಗಡೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ.

ಮಲೆನಾಡಲ್ಲಿ ಮಳೆಯ ಆರ್ಭಟಕ್ಕೆ ಮಹಲ್ ಗೋಡು ಸೇತುವೆ ಮುಳುಗಡೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮಹಲ್ ಗೋಡು ಸೇತುವೆ ಮುಳುಗಡೆ ಹಿನ್ನೆಲೆ, ಬಾಳೆಹೊನ್ನೂರು-ಕಳಸ ಸಂಪರ್ಕ ಬಂದ್ ಆಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದೆ.

ಭಾರೀ ಮಳೆಗೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಕಳೆಗಟ್ಟಿದೆ. 100 ಅಡಿ ಎತ್ತರದಿಂದ ಜಲಧಾರೆ ಧುಮ್ಮಿಕ್ಕುತ್ತಿದೆ. ಚಾರ್ಮಾಡಿ ಘಾಟಿಯ ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮನಸೋತಿದ್ದಾರೆ.

ಹೆಬ್ಬಾಳೆ ಸೇತುವೆ ಮುಳುಗಡೆ

ಭಾರೀ ಮಳೆಯಿಂದ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳಸ, ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಸೇತುವೆ ಮುಳುಗಡೆಯಿಂದಾಗಿ ಕಳಸ-ಹೊರನಾಡು ಸಂಪರ್ಕ ಕಡಿತಗೊಂಡಿದೆ. ಮೊನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಮಲೆನಾಡಿನ ಜನರು ತತ್ತರಿಸಿ ಹೋಗಿದ್ದಾರೆ. ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ಕೃಷ್ಣಾ ನದಿಗೆ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಬಿಡಲಾಗಿದೆ.
ಹೀಗಾಗಿ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಆತಂಕ ಎದುರಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,29,640 ಕ್ಯೂಸೆಕ್ ನೀರು ಬಿಡಲಾಗಿದೆ. ಜಲಾಶಯಕ್ಕೆ 1,20,000 ಕ್ಯೂಸೆಕ್ ಒಳಹರಿವು ಬಂದಿದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ರಾ. ಹೆದ್ದಾರಿ 63 ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಗಾವಳಿ ನದಿ ಪ್ರವಾಹದ ಮಟ್ಟದಲ್ಲಿ ಹರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 63ಕ್ಕೆ ನುಗ್ಗಿದ ಗಂಗಾವಳಿ ನದಿ ನೀರು ನುಗ್ಗಿದ್ದು, ಸುಂಕಸಾಳ ಗ್ರಾಮದ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ