Breaking News

ಅರವಿಂದ್ ಬೆಲ್ಲದ್ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ ; ರಾಜ್ಯ ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆ

Spread the love

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಕ್ಷಣಕ್ಕೊಂದು ಸ್ವರೂಪ ಪಡೆದುಕೊಳ್ತಿದ್ದು, ಇದೀಗ ಮತ್ತೆ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಕಾಶಿ ವಿಶ್ವನಾಥನ ಭೇಟಿಗೆ ತೆರಳಿರುವ ಬೆಲ್ಲದ್, ಅಲ್ಲಿಂದ ನೇರವಾಗಿ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಸದ್ಯ ಖಾಸಗಿ ಹೋಟೆಲ್​ನಲ್ಲಿ ತಂಗಿರುವ ಬೆಲ್ಲದ್​ ಅವರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಬೆಲ್ಲದ್ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಮಾಡಲಾಗುತ್ತದೆ ಅನ್ನೋ ಮಾತುಗಳು ಕೇಳಿಬಂದಿವೆ. ಹೀಗಾಗಿ ಅರವಿಂದ್ ಬೆಲ್ಲದ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಅಂತಾ ಹೇಳಲಾಗಿದೆ. ಹೀಗಾಗಿ ಮತ್ತೆ ಬೆಲ್ಲದ್ ನೇರವಾಗಿ ದೆಹಲಿಗೆ ಪ್ರಯಾಣ ಬೆಳೆಸಿರೋದು ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ